ದೇವನಹಳ್ಳಿ:- ಸಿಎಂ ಸಿದ್ದರಾಮಯ್ಯ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮರು ನಾಮಕರಣ ಮಾಡಿದ್ದಾರೆ. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಿದ್ದ ಸರ್ಕಾರ ಈಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂಬುದಾಗಿ ಮರು ನಾಮಕರಣ ಮಾಡಿದೆ.
ಚಿಕ್ಕಬಳ್ಳಾಪುರ ನಂದಿಗಿರಿಧಾಮದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್, ಸರ್ಕಾರದ ಸಚಿವರ ಸಮ್ಮುಖದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಎಸ್, ಇಂದು ಸಿದ್ದರಾಮಯ್ಯ ನೇತೃತ್ವದಲ್ಲಿ ನಂದಿಗಿರಿಧಾಮದಲ್ಲಿ ನಡೆದ ಕ್ಯಾಬಿನೆಟ್ ಸಭೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ‘ಬೆಂಗಳೂರು ಉತ್ತರ’ ಜಿಲ್ಲೆಯನ್ನಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹೆಸರನ್ನು ಭಾಗ್ಯನಗರ ಎಂದು ನಾಮಕರಣ ಮಾಡುವುದಕ್ಕೆ ಅನುಮೋದನೆ ನೀಡಿದೆ.