Close Menu
Ain Live News
    Facebook X (Twitter) Instagram YouTube
    Monday, June 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ರಾಮನಗರ ಮರುನಾಮಕರಣ: ರಾಜ್ಯ ಸರ್ಕಾರಕ್ಕೆ ತೀರ್ಮಾನಿಸುವ ಅಧಿಕಾರವಿದೆ: ಸಿಎಂ ಸಿದ್ದರಾಮಯ್ಯ

    By Author AINMay 23, 2025
    Share
    Facebook Twitter LinkedIn Pinterest Email
    Demo

    ಮೈಸೂರು : ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

    ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಮೂಲಕ ಜಿಲ್ಲೆಯ ಇತಿಹಾಸವನ್ನು ತಿರುಚಲಾಗುತ್ತಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಯವರು ಟೀಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅಲ್ಲಿನ ಜನರ ಜನಾಭಿಪ್ರಾಯವನ್ನು ಪಡೆದೇ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕುಮಾರಸ್ವಾಮಿಯವರು ರಾಮನಗರ ಜಿಲ್ಲೆ ಸೃಜಿಸುವಾಗ, ಅಲ್ಲಿನ ಇತಿಹಾಸದ ಬಗ್ಗೆ ಯೋಚಿಸಿರಲಿಲ್ಲವೇ ಎಂದು ಮರುಪ್ರಶ್ನಿಸಿದರು.

    ಹೊಸ ಬಟ್ಟೆ ಬಣ್ಣ ಬಿಡುತ್ತೆ ಅನ್ನೋ ಭಯ ಇದ್ದರೆ ಈ ಟ್ರಿಕ್ಸ್ ಟ್ರೈ ಮಾಡಿ ನೋಡಿ! ರಿಸಲ್ಟ್ ಪಕ್ಕಾ

    ಇ.ಡಿ ಹಾಗೂ ಐ.ಟಿ ದಾಳಿಗಳು ರಾಜಕೀಯ ಪ್ರೇರಿತವಾಗಬಾರದು

    ಜಾರಿನಿರ್ದೇಶನಾಲಯ ತನ್ನ ಎಲ್ಲೆಯನ್ನು ಮೀರುತ್ತಿರುವ ಬಗ್ಗೆ ಸರ್ವೋಚ್ಛ ನ್ಯಾಯಾಲಯ ಗಮನಿಸಿರುವ ಕುರಿತು ಪತ್ರರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಇ.ಡಿ ಯವರು, ಐ.ಟಿ.ಯವರು ತನಿಖೆ ಮಾಡುವುದನ್ನೇ ಆಗಲಿ ಅಥವಾ ಕಪ್ಪು ಹಣ ವ್ಯವಹಾರವನ್ನು ಪತ್ತೆ ಹಚ್ಚುವುದನ್ನೇ ಆಗಲಿ ಆಕ್ಷೇಪಿಸುವುದಿಲ್ಲ. ಆದರೆ ಇ.ಡಿ ಮತ್ತು ಐ.ಟಿ ದಾಳಿಗಳು ರಾಜಕೀಯ ದುರುದ್ದೇಶದಿಂದ ನಡೆಯಕೂಡದು. ಪ್ರಸ್ತುತ ಗೃಹ ಸಚಿವ ಜಿ.ಪರಮೇಶ್ವರ ಅವರ ಶಿಕ್ಷಣ ಸಂಸ್ಥೇಯ ಮೇಲೆ ಇ.ಡಿ.ದಾಳಿ ರಾಜಕೀಯ ಪ್ರೇರಿತ. ಸುಪ್ರೀಂ ಕೋರ್ಟ್ ನವರು ಯಾವ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ರೀತಿ ಅವಲೋಕಿಸಿದ್ದಾರೆ ಎಂದು ತೀರ್ಪು ಪರಿಶೀಲಿಸಿದ ನಂತರವಷ್ಟೇ ತಿಳಿಯಲಿದೆ ಎಂದರು.

    ಒಂದು ವರ್ಷದಿಂದ ಅಪರಾಧ ಪ್ರಕರಣಗಳು ಕಡಿಮೆಯಿದೆ

    ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ, ಅಪರಾಧ ಪ್ರಕರಣಗಳ ವಿರುದ್ಧ ಕಠಿಣ ಕ್ರಮವಾಗುತ್ತದೆ. ಆದರೆ ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗಿದ್ದು, ಬಿಜೆಪಿ ಅವಧಿಗೆ ಹೋಲಿಸಿದರೆ ನಮ್ಮ ಸರ್ಕಾರದ ಅವಧಿಯಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಿದೆ. ಅಪರಾಧಗಳನ್ನು ಗಮನಾರ್ಹವಾಗಿ ಕಡಿಮೆ ಮಾಡಲು ಸರ್ಕಾರ ಖಂಡಿತ ಪ್ರಯತ್ನಿಸುತ್ತದೆ ಎಂದರು.

    ಕೇಂದ್ರ ಸರ್ಕಾರ ಕೋವಿಡ್ ಎಚ್ಚರಿಕಾ ಕ್ರಮ ತೆಗೆದುಕೊಳ್ಳಲಿ

    ಸಿಂಗಾಪುರ , ಹಾಂಕಾಂಗ್ ದೇಶದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, ವಿದೇಶದಿಂದ ಆಗಮಿಸುವವರ ಕೋವಿಡ್ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಯಾವುದೇ ಕ್ರಮ ವಹಿಸದೇ, ಇಲ್ಲಿಯೂ ಕೋವಿಡ್ ಪ್ರಕರಣಗಳು ಹೆಚ್ಚುವ ಸಾಧ್ಯತೆಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೋವಿಡ್ ಪ್ರಕರಣಗಳಲ್ಲಿ ಏರಿಕೆ ಕಂಡುಬರುತ್ತಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈ ಬಗ್ಗೆ ಎಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ತ್ವರಿತ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಎಂದರು.

    ದೇಣಿಗೆ ನೀಡುವುದು ತಪ್ಪಲ್ಲ

    ಯಂಗ್ ಇಂಡಿಯಾ ಸಂಸ್ಥೆಗೆ ದೇಣಿಗೆ ನೀಡಿರುವ ಬಗ್ಗೆ ಡಿಸಿಎಂ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ರವರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆಯಾಗಿರುವ ಬಗ್ಗೆ ಮಾತನಾಡಿ, ಯಾವುದೇ ಸಂಸ್ಥೆಗೆ ದೇಣಿಗೆ ನೀಡುವುದು ತಪ್ಪಲ್ಲ ಎಂದರು.

    Demo
    Share. Facebook Twitter LinkedIn Email WhatsApp

    Related Posts

    8 ಸಾವಿರ ಪೊಲೀಸ್ ಪೇದೆಗಳ ಹುದ್ದೆ ಶೀಘ್ರದಲ್ಲೇ ಭರ್ತಿ – ಜಿ.ಪರಮೇಶ್ವರ್!

    June 23, 2025

    ಹಾಸನದಲ್ಲಿ ಕಳವಳಕಾರಿ ಘಟನೆ: ಹೃದಯಾಘಾತಕ್ಕೆ ಮತ್ತಿಬ್ಬರು ಬಲಿ!

    June 23, 2025

    , ಮುರುಡೇಶ್ವರ ದೇವಾಲಯಕ್ಕೆ ಹೋಗುವವರ ಗಮನಕ್ಕೆ: ಇನ್ಮುಂದೆ ಅರೆಬರೆ ಬಟ್ಟೆ ಧರಿಸಿ ಬಂದ್ರೆ ನೋ ಎಂಟ್ರಿ!

    June 23, 2025

    ಮಿತ್ರ ಪಕ್ಷ ಬಿಜೆಪಿಗೆ ಬಿಗ್ ಶಾಕ್: ‘ಕಮಲ’ ನಾಯಕನನ್ನ ಜೆಡಿಎಸ್​ಗೆ ಕರೆ ತಂದ್ರು ಕುಮಾರಸ್ವಾಮಿ!

    June 22, 2025

    Crime News: ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಕೊಲೆ!

    June 22, 2025

    ಸೈಬರ್​ ಕ್ರೈಂ: ಬೆಳಗಾವಿ ಪೊಲೀಸ್​ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್​ಬುಕ್​ ಖಾತೆ!

    June 22, 2025

    ಜನಸಾಮಾನ್ಯರ ಮಕ್ಕಳಿಗಾಗಿ ಕೃಷಿ ಕಾಲೇಜು ಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್

    June 22, 2025

    ಡಿಕೆಶಿ ಏನಿದ್ರು ಸಿಎಂ ಆಗುವ ಕನಸು ಕಾಣಬೇಕು ಅಷ್ಟೇ: ಆದ್ರೆ ಯಾರು ಬಿಟ್ಟು ಕೊಡ್ತಾರೆ? – HD ಕುಮಾರಸ್ವಾಮಿ!

    June 22, 2025

    ಸಂಕಷ್ಟದಲ್ಲಿ ಮಾವು ಬೆಳೆಗಾರರು: ನೆರವಿಗೆ ಮುಂದಾದ ಕೇಂದ್ರ: 2.5 ಲಕ್ಷ ಟನ್​​ ಮಾವು ಖರೀದಿಗೆ ಒಪ್ಪಿಗೆ!

    June 22, 2025

    ಹಾಸನದಲ್ಲೊಂದು ವಿದ್ರಾವಕ ಘಟನೆ: ಹೆಂಡತಿ ಊಟ ಬಡಿಸುತ್ತಿದ್ದಾಗಲೇ ಹೃದಯಾಘಾತದಿಂದ ಗಂಡ ಸಾವು!

    June 22, 2025

    ವಿದ್ಯಾರ್ಥಿಗಳು, ಪೋಷಕರು ಮಿಸ್ ಮಾಡ್ದೆ ಸುದ್ದಿ ಓದಿ: ಇನ್ಮುಂದೆ ಶಾಲೆಗಳಲ್ಲಿ ಹೊಸ ರೂಲ್ಸ್! ಏನದು?

    June 22, 2025

    ರಾತ್ರೋರಾತ್ರಿ ಆಸ್ಪತ್ರೆಗೆ ನುಗ್ಗಿ ಮೊಬೈಲ್ ಕಳ್ಳತನ: ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಗಿಲ್ಲ ಭದ್ರತೆ..ರೋಗಿಗಳ ಗೋಳಾಟ!

    June 22, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.