ಬೆಂಗಳೂರು: ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣ ಸಂಬಂಧ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ. ಘಟನೆ ಸಂಬಂಧ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೇ ನೀಡಿದ್ದಾರೆ.
ನೀವು HDFC ಕ್ರೆಡಿಟ್ ಕಾರ್ಡ್ ಬಳಸುತ್ತಿದ್ದೀರಾ? ಹಾಗಾದ್ರೆ ಈ ಪ್ರಮುಖ ಬದಲಾವಣೆಗಳ ಬಗ್ಗೆ ತಿಳಿದುಕೊಳ್ಳಲೇಬೇಕು!
ನಗರದಲ್ಲಿ ಮಾತನಾಡಿದ ಅವರು, ನನಗೆ ಆ ಬಗ್ಗೆ ಮಾಹಿತಿ ಇಲ್ಲ. ಆದೇಶ ಏನಾಗಿದೆ ನೋಡಬೇಕಿದೆ. ಮುಂದೆ ಕಾನೂನು ಪ್ರಕಾರ ಏನು ಕ್ರಮ ಸಿಎಂ ಜೊತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದರು.
ಜೂನ್ 4 ರಂದು ನಗರದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ವಿನಾಕಾರಣ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಿ ತನ್ನ ಮಾನ ಉಳಿಸಿಕೊಳ್ಳಲು ಪ್ರಯತ್ನಿಸಿದ ಸರ್ಕಾರದ ಪ್ರಯತ್ನಕ್ಕೆ ಮುಖಭಂಗವಾಗಿದೆ. ಪೊಲೀಸ್ ಅಧಿಕಾರಿಗಳನ್ನು ಆಧಾರವಿಲ್ಲದೆ ಸಸ್ಪೆಂಡ್ ಮಾಡಿರುವುದು ತಪ್ಪೆಂದು ಕೇಂದ್ರ ಆಡಳಿತಾತ್ಮಕ ನ್ಯಾಯಾಧಿಕರಣ ಹೇಳಿದೆ.