ಬೆಂಗಳೂರು:- ನಗರದ ಬಹುತೇಕ ಭಾಗಗಳಲ್ಲಿ ಜೂನ್ 19 ರಂದು ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
Chicken Benefits: ಚಿಕನ್ ತಿನ್ನೋದ್ರಿಂದ ಎಷ್ಟೆಲ್ಲಾ ಆರೋಗ್ಯ ಬೆನಿಫಿಟ್ ಗಳಿದೆ ಗೊತ್ತಾ?
ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುವ ಸಲುವಾಗಿ ಜೂನ್ 19 ರ ಬೆಳಗ್ಗೆ 6 ರಿಂದ ಹಾಗೂ ಜೂ.20ರ ಬೆಳಗ್ಗೆ 6 ಗಂಟೆ ವರೆಗೆ ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1 ರಿಂದ ಹಂತ- 5ರ ವರೆಗಿನ ಎಲ್ಲಾ ಜಲರೇಚಕ ಯಂತ್ರಾಗಾರಗಳನ್ನು ಸ್ಥಗಿತಗೊಳಿಸಲಾಗುತ್ತಿದೆ. ಇದರಿಂದ ಬಿಬಿಎಂಪಿ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ. ಹೀಗಾಗಿ ಬೆಂಗಳೂರಿನ ನಾಗರೀಕರಿಗೆ, ವಾಣಿಜ್ಯ ಹಾಗೂ ಕೈಗಾರಿಕಾ ಪ್ರದೇಶಗಳಿಗೆ ಮುಂಜಾಗ್ರತೆಯಾಗಿ ಅಗತ್ಯವಿರುವ ನೀರನ್ನು ಸಂಗ್ರಹಣೆ ಮಾಡಿಕೊಳ್ಳುವಂತೆ ಜಲಮಂಡಳಿ ಸೂಚನೆ ನೀಡಿದೆ.
ನಿರ್ವಹಣಾ ಕಾರ್ಯದ ವೇಳೆ, ಹಂತ-1ರಿಂದ ಹಂತ-5ರ ತನಕ ಇರುವ ಎಲ್ಲಾ ಜಲರೇಚಕ ಕೇಂದ್ರಗಳನ್ನು ಸ್ಥಗಿತಗೊಳಿಸಲಾಗುವುದು. ಇದರಿಂದಾಗಿ ಕಾವೇರಿ ನೀರಿನ ಸರಬರಾಜು ಸಂಪೂರ್ಣವಾಗಿ ನಿರ್ಬಂಧಿತವಾಗಲಿದೆ. ನೀರಿನ ವ್ಯತ್ಯಯವನ್ನು ಮನನದಲ್ಲಿಟ್ಟುಕೊಂಡು ನಗರದ ನಾಗರಿಕರು, ವಾಣಿಜ್ಯ ಸಂಸ್ಥೆಗಳು ಹಾಗೂ ಕೈಗಾರಿಕೆಗಳು ಮುಂಜಾಗ್ರತಾ ಕ್ರಮವಾಗಿ ಅಗತ್ಯವಿರುವ ನೀರನ್ನು ಪೂರ್ವದಲ್ಲಿ ಸಂಗ್ರಹಿಸಿಕೊಳ್ಳುವಂತೆ ಬೃಹತ್ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಮನವಿ ಮಾಡಿದೆ.