ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಫ್ಯಾಮಿಲಿ ಮ್ಯಾಟರ್ ಬೀದಿಗೆ ಬಿದ್ದಿದೆ. ಮಗಳು ಚೈತ್ರಾ ಕುಂದಾಪುರ ಬಗ್ಗೆ ತಂದೆ ಗಂಭೀರ ಆರೋಪ ಮಾಡಿದ್ದರು. ತಂದೆ ಆರೋಪದ ಬೆನ್ನಲ್ಲೇ ಚೈತ್ರಾ ಕುಂದಾಪುರ ರಿಯಾಕ್ಟ್ ಮಾಡಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಸ್ಟೇಟಸ್ ಹಾಕಿರುವ ಚೈತ್ರಾ ಕುಂದಾಪುರ, ‘ಕುಡುಕ ತಂದೆಯ ಚಿತ್ರ ಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು. ಎಂತಹ ಮಕ್ಕಳಿಗೂ ಕುಡುಕ ತಂದೆ ಸಿಗಬಾರದು. ಎರಡು ಕ್ವಾಟರ್ ನಾನು ಕೊಟ್ರೆ ನನ್ನ ಮಕ್ಕಳು ದೇವರು ಅನ್ನುವವರ ಮಾತಿಗೆ ಬೆಲೆ ಕೊಡುವವರು ಮೂರ್ಖರಾಗ್ತಾರೆ’ ಎಂದು ಚೈತ್ರಾ ಬರೆದಿದ್ದಾರೆ.
ಚೈತ್ರಾ ಕುಂದಾಪುರ ಇತ್ತೀಚೆಗಷ್ಟೇ ಅದ್ಧೂರಿಯಾಗಿ ಮದುವೆಯಾಗಿದ್ದರು. ಶ್ರೀಕಾಂತ್ ಕಶ್ಯಪ್ ಎಂಬುವರ ಜೊತೆ ಚೈತ್ರಾ ಏಳು ಹೆಜ್ಜೆ ಹಾಕಿದ್ದರು. ಈ ಮದುವೆಗೆ ಚೈತ್ರಾ ತಂದೆ ಅವರು ಬಂದಿರಲಿಲ್ಲ. ಮದುವೆ ಆದ ಕೆಲವೇ ದಿನಗಳಲ್ಲಿ ಮಾತನಾಡಿರುವ ಚೈತ್ರಾ ತಂದೆ ಬಾಲಕೃಷ್ಣ ನಾಯ್ಕ್ ಅವರು ನನಗೆ ವಿವಾಹಕ್ಕೆ ಆಮಂತ್ರಣವೇ ಇರಲಿಲ್ಲ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಮಾತಾಡಿರುವ ಬಾಲಕೃಷ್ಣ ನಾಯ್ಕ್, ಆಕೆ ನನ್ನನ್ನು ಮದುವೆಗೆ ಕರೆದಿಲ್ಲ. ನಾನು ಮದುವೆಗೆ ಹೋಗಿಲ್ಲ. ಈ ಮದುವೆಯನ್ನು ನಾನು ಒಪ್ಪಲಾರೆ. ಚೈತ್ರಾ ಮತ್ತು ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಚೈತ್ರಾ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡುತ್ತಿದ್ದಾರೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಇವರು ಹಣ ಹಂಚಿಕೊಂಡಿದ್ದಾರೆ. ನನಗೆ ನನ್ನ ದೊಡ್ಡ ಮಗಳು ಮಾತ್ರ ಆಸರೆ. ನನ್ನ ದೊಡ್ಡ ಮಗಳು ಗಾಯತ್ರಿ ನಿರಪರಾಧಿ. ನಾನು ಮತ್ತು ನನ್ನ ದೊಡ್ಡ ಮಗಳು ಮರ್ಯಾದೆಯಿಂದ ಬದುಕುತ್ತಿದ್ದೇವೆ ಎಂದು ಹೇಳಿದ್ದಾರೆ.