ಜೈಪುರ: ಐಪಿಎಲ್‌ನಲ್ಲಿ ಅತಿ ವೇಗದ ಸೆಂಚುರಿ ಬಾರಿಸಿದ 14 ವರ್ಷದ ವೈಭವ್ ಸೂರ್ಯವಂಶಿ ಇವತ್ತು ಕ್ರಿಕೆಟ್ ಜಗತ್ತೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಇವನ ಆಕ್ರಮಣಾಕಾರಿ ಬ್ಯಾಟಿಂಗ್, ಬೌಂಡರಿ, ಸಿಕ್ಸರ್ ಶೈಲಿಗೆ ಮಾಜಿ ಕ್ರಿಕೆಟಿಗರು, ಕ್ರಿಕೆಟ್ ಅಭಿಮಾನಿಗಳು ಫಿದಾ ಆಗಿದ್ದಾರೆ.
ಇದೀಗ ವೈಭವ್ ಸೂರ್ಯವಂಶಿಗೆ ಬಿಹಾರ ರಾಜ್ಯ ಸರ್ಕಾರ ಬಂಪರ್ ಬಹುಮಾನ ನೀಡಿ ಘೋಷಿಸಿದೆ. ಶತಕ ಬಾರಿಸಿದ ವೈಭವ್ ಸೂರ್ಯವಂಶಿಗೆ ಸಿಎಂ ನಿತೀಶ್ ಕುಮಾರ್ ತಮ್ಮ ನಿವಾಸದಲ್ಲಿ ಸನ್ಮಾನಿಸಿದರು. ಇದೇ ವೇಳೆ ಬಿಹಾರ ರಾಜ್ಯ ಸರ್ಕಾರದಿಂದ 10 ಲಕ್ಷ ರೂ. ಬಹುಮಾನವನ್ನೂ ಘೋಷಿಸಿದರು.
ಬಿಳಿ ಕೂದಲನ್ನು ಬೇರುಗಳಿಂದ ಕಪ್ಪಾಗಿಸುತ್ತೆ ಈ ಹೇರ್ ಪ್ಯಾಕ್! ಮೊಣಕಾಲುದ್ದ ಕೂದಲು ಗ್ಯಾರಂಟಿ!
ವೈಭವ್ ಸೂರ್ಯವಂಶಿಗೆ ಅಭಿನಂದನೆ ತಿಳಿಸಿದರು. ಕಿರಿಯ ವಯಸ್ಸಿನಲ್ಲೇ ಅವರ ಪ್ರತಿಭೆ ಮುಂದೆ ಭಾರತೀಯ ಕ್ರಿಕೆಟ್‌ಗೆ ಹೊಸ ಭರವಸೆಯಾಗಿದೆ. ಇಂದು ಇಡೀ ದೇಶವೇ ಅವನ ಬಗ್ಗೆ ಹೆಮ್ಮೆ ಪಡುತ್ತಿದೆ. 2024ರಲ್ಲಿ ನಾನು ವೈಭವ್ ಮತ್ತು ಅವರ ತಂದೆಯನ್ನ ಭೇಟಿಯಾಗಿದ್ದೆ, ಆಗಲೇ ನಾನು ಅವರ ಭವಿಷ್ಯ ಉಜ್ವಲವಾಗಿರಲಿದೆ ಎಂದು ಹಾರೈಸಿದ್ದೆ.
ಹಾಗೆಯೇ ಇಂದು ಯಶಸ್ಸು ಕಾಣುತ್ತಿದ್ದಾರೆ. ಐಪಿಎಲ್‌ನಲ್ಲಿ ಅವರ ಅತ್ಯುತ್ತಮ ಪ್ರದರ್ಶನದ ಬಳಿಕ ನಾನು ಅವರಿಗೆ ಫೋನ್ ಮಾಡಿ ಮಾತನಾಡಿದ್ದೆ. ವೈಭವ್ ಭವಿಷ್ಯದಲ್ಲಿ ಭಾರತೀಯ ಕ್ರಿಕೆಟ್ ತಂಡದಲ್ಲಿ ಇನ್ನಷ್ಟು ದಾಖಲೆಗಳನ್ನು ಸೃಷ್ಟಿಸಿ ದೇಶಕ್ಕೆ ಕೀರ್ತಿ ತರಲೆಂದು ಹಾರೈಸುತ್ತೇನೆ ಎಂದು ಶುಭಕೋರಿದರು.