ಬೆಂಗಳೂರು: ಸಿಬಿಐ ಕೋರ್ಟ್ ವಿಧಿಸಿದ್ದ ಶಿಕ್ಷೆ ರದ್ದುಗೊಳಿಸಿ ಕೋರ್ಟ್ ವಿಧಿಸಿದ್ದ ಶಿಕ್ಷೆ ರದ್ದುಗೊಳಿಸಿ ಗಾಲಿ ಜನಾರ್ಧನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ. ಸಿಬಿಐ ಕೋರ್ಟ್ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಿರುವ ಹೈಕೋರ್ಟ್, ಹಲವು ಷರತ್ತುಗಳನ್ನ ವಿಧಿಸಿ ಜಾಮೀನು ನೀಡಿದೆ.
10 ಲಕ್ಷ ರೂಪಾಯಿ ಮೌಲ್ಯದ 2 ಶ್ಯೂರಿಟಿ ನೀಡಲು ಸೂಚಿಸಿದೆ. ಜೊತೆಗೆ ಭಾರತ ಬಿಟ್ಟು ಹೋಗಲು ಜನಾರ್ದನ ರೆಡ್ಡಿ ಅನುಮತಿ ಇಲ್ಲ. ಪಾಸ್ಪೋರ್ಟ್ ವಶಕ್ಕೆ ಪಡೆಯಲು ಕೋರ್ಟ್ ಸೂಚನೆ ನೀಡಿದೆ. ಅವಿಭಜಿತ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ,
ಜಸ್ಟ್ ಈ ಎಲೆ ಜಗಿದು ರಸ ಸೇವಿಸಿದ್ರೆ ಸಾಕು ಕೊಲೆಸ್ಟ್ರಾಲ್ ಕರಗಿ ಹೋಗುತ್ತೆ!
ಜನಾರ್ದನ ರೆಡ್ಡಿ ಮತ್ತು ಅವರ ಸಂಬಂಧಿ ಓಬಳಾಪುರಂ ಮೈನಿಂಗ್ ಕಾರ್ಪೊರೇಷನ್ (ಒಎಂಸಿ) ವ್ಯವಸ್ಥಾಪಕ ನಿರ್ದೇಶಕ ಬಿ.ವಿ. ಶ್ರೀನಿವಾಸ್ ರೆಡ್ಡಿ ಸೇರಿದಂತೆ ನಾಲ್ವರಿಗೆ ಹೈದರಾಬಾದ್ನಲ್ಲಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.
ಸುಮಾರು 16 ವರ್ಷಗಳ ಹಿಂದೆ ಈ ಪ್ರಕರಣವನ್ನು ಸಿಬಿಐ ದಾಖಲಿಸಿತ್ತು. ಪ್ರಕರಣ ದಾಖಲಾಗುವ ಸಮಯದಲ್ಲಿ ಆಂಧ್ರಪ್ರದೇಶ ಗೃಹ ಸಚಿವೆಯಾಗಿದ್ದ ಸಬಿತಾ ಇಂದ್ರಾ ರೆಡ್ಡಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಬಿ ಕೃಪಾನಂದಂ ವಿರುದ್ಧದ ಆರೋಪಗಳನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಖುಲಾಸೆಗೊಳಿಸಲಾಗಿತ್ತು.