ಬೆಂಗಳೂರು: ಬಿಡದಿಯ ಕೇತಗಾನಹಳ್ಳಿ ಬಳಿ HDK ಸರ್ಕಾರಿ ಜಮೀನು ಒತ್ತುವರಿ ಆರೋಪದ ಕೇಸ್ ಗೆ ಸಂಬಂಧಿಸಿದಂತೆ ಹೈಕೋರ್ಟ್ ಹೆಚ್ ಡಿ ಕುಮಾರಸ್ವಾಮಿ ಗೆ ಬಿಗ್ ರಿಲೀಫ್ ನೀಡಿದೆ. ಸರ್ಕಾರ ರಚಿಸಿದ್ದ ಎಸ್ಐಟಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿ, ನ್ಯಾ.ಇ.ಎಸ್.ಇಂದಿರೇಶ್ರಿಂದ ಆದೇಶ ನೀಡಿದೆ.
ಡಯೆಟ್ ಗೆ ಹೇಳಿ ಗುಡ್ ಬಾಯ್: ಬೆಳಗ್ಗೆ ದೋಸೆ-ಇಡ್ಲಿ ತಿಂದೇ ಸ್ಲಿಮ್ ಆಗಬಹುದು! ಹೇಗೆ ಅಂತೀರಾ?
ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ರಚನೆ ಪ್ರಶ್ನಿಸಿ ಹೈಕೋರ್ಟ್ಗೆ ಹೆಚ್.ಡಿ.ಕುಮಾರಸ್ವಾಮಿ ಅರ್ಜಿ ಸಲ್ಲಿಸಿದ್ದರು. ಇಂದು ಹೈಕೋರ್ಟ್ ವಿಚಾರಣೆ ಕೈಗೆತ್ತಿಕೊಂಡಿತ್ತು. ಈ ವೇಳೆ ಹೆಚ್ಡಿ ಕುಮಾರಸ್ವಾಮಿ ಪರ ಹಿರಿಯ ವಕೀಲ ಉದಯ್ ಹೊಳ್ಳ ಮತ್ತು ಎ.ವಿ.ನಿಶಾಂತ್ ವಾದ ಮಂಡಿಸಿದ್ದು,
ಅಧಿಸೂಚನೆಯಿಲ್ಲದೇ ಎಸ್ಐಟಿ ರಚನೆ ಕಾನೂನುಬಾಹಿರ. ಎಸ್ಐಟಿಯ ಕ್ರಮಗಳನ್ನು ಅನೂರ್ಜಿತವೆಂದು ಘೋಷಿಸಲು ಮನವಿ ಮಾಡಿದರು.
ಇನ್ನು ಜನವರಿ ತಿಂಗಳಿನಲ್ಲಿ ಸರ್ಕಾರ ಒತ್ತುವರಿ ಪತ್ತೆಗೆ ಐಎಎಸ್ ಅಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ ಎಸ್ಐಟಿ ರಚಿಸಲಾಗಿತ್ತು. ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಮತ್ತು ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ-2011ರ ಅಡಿಯಲ್ಲಿ ಎಸ್ಐಟಿ ರಚನೆ ಮಾಡಲಾಗಿತ್ತು. 6 ಎಕರೆ ಒತ್ತುವರಿ ತೆರವುಗೊಳಿಸುವಂತೆ ತಹಶೀಲ್ದಾರ್ ನೋಟಿಸ್ ನೀಡಿದ್ದರು.