ಬೆಂಗಳೂರು: ರೀಲ್ಸ್ ಹುಚ್ಚಿಗೆ ಮಚ್ಚು ಹಿಡಿದು ಪೋಸ್ ಕೊಟ್ಟಿದ್ದ ಮಚ್ಚೇಶ್ವರರಿಗೆ ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದೆ. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಜಾಮೀನು ರಜತ್ ಹಾಗೂ ವಿನಯ್ ಗೌಡಗೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಇದಕ್ಕೂ ಮುನ್ನ, ಕೋರ್ಟ್ ಇಬ್ಬರು ಆರೋಪಿಗಳಿಗೆ ಏಪ್ರಿಲ್ 9ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. 10ಸಾವಿರ ರೂ. ಶ್ಯೂರಿಟಿ ನೀಡುವಂತೆ ಷರತ್ತು ವಿಧಿಸಿ ಜಾಮೀನು ವಿಧಿಸಿದೆ.
ಆರೋಪಿಗಳನ್ನು ಕೋರ್ಟ್ ಗೆ ಹಾಜರುಪಡಿಸಿದ ವೇಳೆ ಪೊಲೀಸರ ಪರ ವಾದ ಮಾಡಿದ ವಕೀಲ ಚಂದ್ರೇಗೌಡ, ಆರೋಪಿಗಳು ಸಾಕ್ಷ್ಯನಾಶ ಮಾಡಿದ್ದು ಅವರಿಗೆ ಜಾಮೀನು ನೀಡಬಾರದು ಎಂದು ವಾದಿಸಿದರು. ಆದರೆ ಆರೋಪಿಗಳ ಪರ ವಾದ ಮಂಡಿಸಿದ ವಕೀಲ, ಸರ್ಚ್ ವಾರಂಟ್ ತೆಗೆದುಕೊಂಡು ಮನೆಯನ್ನೆಲ್ಲಾ ಸರ್ಚ್ ಮಾಡಿದ್ದಾರೆ. ಮುಂದೆ ಏನೇ ಇದ್ದರೂ ಸಹಕಾರ ನೀಡ್ತಾರೆ. ವಿನಯ್ ಗೆ ಭಾನುವಾರ ಚಿತ್ರೀಕರಣ ಸಹ ಇದೆ. ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಿದ್ದಾರೆ. ಅವರು ಚಿತ್ರೀಕರಣದಲ್ಲಿ ಭಾಗಿ ಆಗಬೇಕಾದ ಅವಶ್ಯಕತೆ ಇದೆ. ಅವರಿಗೆ ಕಣ್ಣಿನ ಸಮಸ್ಯೆಯೂ ಇದೆ. ಹೀಗಾಗಿ ಬೇಲ್ ನೀಡಬೇಕೆಂದು ವಿನಯ್ ಪರ ವಕೀಲರ ಮನವಿ ಮಾಡಿದರು. ಪೊಲೀಸರು ಸಹ ತಮಗೆ ವಿನಯ್ ಮತ್ತು ರಜತ್ ಅವರ ಕಸ್ಟಡಿಯ ಅವಶ್ಯಕತೆ ಇಲ್ಲವೆಂದು ಹೇಳಿದರು. ಹಾಗಾಗಿ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ ಎಂದು ಆರೋಪಿ ಪರ ವಕೀಲರು ಹೇಳಿದ್ದಾರೆ. ಇಂದು ಅಥವಾ ನಾಳೆ ಆರೋಪಿಗಳಿಬ್ಬರು ಹೊರಬರುವ ಸಾಧ್ಯತೆ ಇದೆ.
ಮುಚ್ಚು ಹಿಡಿದು ರೋಡ್ ನಲ್ಲಿಯೇ ರೀಲ್ಸ್ ಮಾಡಿದ್ದ ರಜತ್ ಹಾಗೂ ವಿನಯ್ ಗೌಡ ಇಬ್ಬರನ್ನು ಪೊಲೀಸ್ ಬಂಧಿಸಿ ತನಿಖೆಯನ್ನು ಚುರುಕುಗೊಳಿಸಿದೆ. ಇದೂವರೆಗೂ ಒರಿಜಿನಲ್ ಮಚ್ಚು ಸಿಗದೇ ಇರೋ ಕಾರಣ ಆರೋಪಿಗಳು ಮತ್ತಷ್ಟು ಫಜೀತಿ ಸಿಲುಕಿದ್ದಾರೆ. ಇನ್ನೂ ರಜತ್ ರು ದರ್ಶನ್ ನಟನೆಯ ‘ಕರಿಯ’ ಸಿನಿಮಾ ಲುಕ್ನಲ್ಲಿ ಕಾಣಿಸಿಕೊಂಡಿದ್ರೆ, ಇತ್ತ ವಿನಯ್ ಪುಷ್ಪರಾಜ್ ಲುಕ್ನಲ್ಲಿ ಮಚ್ಚು ಹಿಡಿದು ಇಬ್ಬರು ರೀಲ್ಸ್ ಮಾಡಿದ್ದರು. ಇದರಿಂದ ಈಗ ಇಬ್ಬರೂ ಕಾನೂನು ಸಂಕಷ್ಟ ಎದುರಿಸುವಂತಾಗಿತ್ತು.