ಕೋಲಾರ: ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅಪಘಾತಗಳಿಂದ ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದಕ್ಕೆ ವಾಹನ ಚಾಲಕರ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಇದೀಗ ಓವರ್ಟೇಕ್ ಮಾಡಲು ಹೋಗಿ ಬೈಕ್, ಕಾರಿಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ್ದು, ಹಿಂಬದಿ ಸವಾರನಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಕೊತ್ತೂರು ಗ್ರಾಮದ ಬಳಿ ಈ ಘಟನೆ ನಡೆದಿದೆ. ಮೃತ ಬೈಕ್ ಸವಾರನನ್ನು ಕೋಲಾರದ ಗಾಂಧಿನಗರ ನಿವಾಸಿ ಚಂದ್ರಶೇಖರ್ (50) ಎಂದು ಗುರುತಿಸಲಾಗಿದೆ.
Ugadi 2025: ಇಂದು “ಯುಗಾದಿ” ಹಬ್ಬದ ಸಂಭ್ರಮ: ಅಪ್ಪಿ ತಪ್ಪಿಯೂ ಈ ಕೆಲಸಗಳನ್ನು ಮಾಡಬೇಡಿ..!
ಘಟನೆಯಲ್ಲಿ ಮತ್ತೊಬ್ಬ ಬೈಕ್ ಸವಾರ ಸುರೇಶ್ಗೆ ಕಾಲು ಮುರಿದಿದ್ದು, ಸಣ್ಣ ಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅತಿ ವೇಗವಾಗಿ ಓವರ್ಟೇಕ್ ಮಾಡಲು ಹೋಗಿ ಬೈಕ್ ಕಾರಿಗೆ ಡಿಕ್ಕಿಯಾಗಿದೆ. ಘಟನೆ ಬಳಿಕ ಕಾರನ್ನು ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.