ದೊಡ್ಡಬಳ್ಳಾಪುರ: ಚಾಲಕನ ನಿಯಂತ್ರಣತಪ್ಪಿ ದ್ವಿಚಕ್ರ ವಾಹನ ಮರಕ್ಕೆ ಗುದ್ದಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವನಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಗುಂಡಮ್ಮಗೆರೆ ಕ್ರಾಸ್ ಸಮೀಪದ ನೆಲ್ಲುಕುಂಟೆ ಸರ್ಕಲ್ ಬಳಿ ತಡರಾತ್ರಿ ನಡೆದಿದೆ.
ಗುಂಡಮ್ಮಗೆರೆ ಗ್ರಾಮದ ವೆಂಕಟೇಶ್(45), ಶಿವಪುರ ಗ್ರಾಮದ ರಕ್ಷಿತ್ (25) ಮೃತ ದುರ್ದೈವಿಗಳು. ಮುತ್ತೂರು ಗ್ರಾಮದ ವೆಂಕಟೇಶ್ (45)ಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿ ವೇಳೆ ಒಂದೇ ಬೈಕಿನಲ್ಲಿ ಮೂರು ಜನ ಗುಂಡಮ್ಮಗೆರೆ ಕ್ರಾಸ್ ನಿಂದ ನೆಲ್ಲುಕುಂಟೆ ಕಡೆ ಹೋಗುವಾಗ ಆಯಾತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು,
ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ