ಮಂಡ್ಯ:- ಮಂಡ್ಯ ಜಿಲ್ಲೆಯ ಮದ್ದೂರಿ ತಾಲೂಕಿನ ಹೊಸಗಾವಿ ಬಳಿ ಸವಾರನ ನಿಯಂತ್ರಣ ಕಳೆದುಕೊಂಡ ಬೈಕ್ ವಿಸಿ ನಾಲೆಗೆ ಬಿದ್ದ ಪರಿಣಾಮ ಬೈಕ್ ಹಿಂಬದಿ ಕುಳಿತಿದ್ದ ವ್ಯಕ್ತಿ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ಜರುಗಿದೆ.
ರಾಮಣ್ಣ ಹಾಗೂ ಭರತ್ ಮೃತರು. ಇವರು ಮದ್ದೂರು ಮೂಲದವರು ಎಂದು ತಿಳಿದು ಬಂದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೊಸಗಾವಿ ಗ್ರಾಮದ ಬಳಿ ವಿಸಿ ನಾಲೆಯ ತಡೆ ಗೋಡೆಗೆ ಡಿಕ್ಕಿ ಹೊಡೆದ ಬೈಕ್, ನಾಲೆಗೆ ಉರುಳಿ ಬಿದ್ದಿದೆ. ಈ ವೇಳೆ ಬೈಕ್‌ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಅನುನೀಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತ ದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.