ಬೆಂಗಳೂರು:- ಬಿಜೆಪಿ ಅವಧಿಯ ಕೋವಿಡ್ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಕೆಗೆ ಇಂದೇ ಅಂತಿಮ ದಿನವಾಗಿದೆ. ಇಂದು ಜಸ್ಟೀಸ್ ಮೈಕಲ್ ಡಿ ಕುನ್ನಾ ಆಯೋಗವು, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಕಾಲದ ಹಗರಣ ಆರೋಪ ಪ್ರಕರಣದ ಅಂತಿಮ ವರದಿ ಸಲ್ಲಿಕೆ ಮಾಡಲಿದೆ.
ಮಹಿಳೆ ಮೇಲೆ ಖಾಸಗಿ ಬಸ್ ಸಿಬ್ಬಂದಿ ಲೈಂಗಿಕ ದೌರ್ಜನ್ಯ; ಚೀರಾಟ, ಕೂಗಾಟ ಕಂಡು ಸ್ಥಳೀಯರಿಂದ ರಕ್ಷಣೆ
ಬಿಜೆಪಿ ಅವಧಿಯಲ್ಲಿ 2 ಕೋಟಿಗೂ ಅಧಿಕ ಅಕ್ರಮ ನಡೆದಿದೆ ಎಂದು ಆರೋಪ ಕೇಳಿಬಂದಿತ್ತು. ಹಗರಣದ ಬಗ್ಗೆ ವರದಿ ಸಲ್ಲಿಸಲು ಕಾಂಗ್ರೆಸ್ ಸರ್ಕಾರ 2023 ಆಗಸ್ಟ್ ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ಮೈಕಲ್ ಡಿ ಕುನ್ನಾ ನೇತೃತ್ವದ ಆಯೋಗ ರಚನೆ ಮಾಡಿತ್ತು. ಇಂದು ಸಂಜೆ 5 ಗಂಟೆಗೆ ಸಿಎಂ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯಗೆ ಆಯೋಗ ವರದಿ ಸಲ್ಲಿಕೆ ಮಾಡಲಿದೆ.
ಈಗಾಗಲೇ ಮಧ್ಯಂತರ ವರದಿ ಸಲ್ಲಿಸಿ ಹಲವು ಪ್ರಕರಣಗಳ ತನಿಖೆಗೆ ಶಿಫಾರಸು ಮಾಡಿತ್ತು. ವೆಂಟಿಲೇಟರ್ಗಳ ಖರೀದಿ, ಆಕ್ಸಿಜನ್ ಉಪಕರಣಗಳ ಖರೀದಿ, ನಿರ್ವಹಣೆ ಲೋಪ, ಕೋವಿಡ್-19 ನಿರ್ವಹಣಾ ಉಪಕರಣಗಳು, ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಕಿಟ್ಗಳ ಖರೀದಿ ಮತ್ತು ಸಂಗ್ರಹಣೆಯಲ್ಲಿ ಲೋಪ, ಅಕ್ರಮಗಳ ಆರೋಪದ ಬಗ್ಗೆ ತನಿಖೆಗೆ ಸೂಚಿಸಲಾಗಿತ್ತು.