ಬೆಂಗಳೂರು: ಸತ್ತವರ ಕುಟುಂಬಸ್ಥರನ್ನ ಇಟ್ಕೊಂಡು ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, 10 ಲಕ್ಷ ರೂ. ಪರಿಹಾರ ಸಾಕಾಗಲ್ಲ, ಕನಿಷ್ಠ 50 ಲಕ್ಷ ರೂ. ಕೊಡಬೇಕು. ನಾನೂ ಕೂಡ ಸರ್ಕಾರಕ್ಕೆ ಈ ಬಗ್ಗೆ ಒತ್ತಾಯ ಮಾಡ್ತೀನಿ.
ನಿತ್ಯ ನೀವು ಟಾಯ್ಲೆಟ್ ಗೆ ಹೋದ ಬಳಿಕ ಈ ಲಕ್ಷಣಗಳು ಕಾಣುತ್ತಾ!? ಹಾಗಿದ್ರೆ ಇದು ಹೊಟ್ಟೆ ಕ್ಯಾನ್ಸರ್!
ಸತ್ತವರ ಕುಟುಂಬಸ್ಥರನ್ನ ಇಟ್ಕೊಂಡು ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಮೋದಿ ರಾಜೀನಾಮೆ ಕೊಟ್ಟರೆ ನಾವೂ ರಾಜೀನಾಮೆ ಕೊಡಿಸುತ್ತೇವೆ. ಮೋದಿ, ಶಾ ರಾಜೀನಾಮೆ ಕೊಡಿಸಲು ತಾಕತ್ತು ಇದ್ಯಾ? ಕುಂಭಮೇಳದಲ್ಲಿ ಎಷ್ಟು ಜನ ಸತ್ತರು? ಬೆಂಕಿ ಹಚ್ಚೋ ಕೆಲಸ ಮಾಡಬಾರದು ಅಂತ ತಿಳಿವಳಿಕೆ ನೀಡಿದ್ದಾರೆ.
ಇಂತಹ ಘಟನೆ ಆಗಬಾರದಿತ್ತು, ಆದ್ರೆ ಆಗಿಹೋಗಿದೆ. ಅದಕ್ಕೆ ಪೊಲೀಸ್ ಅಧಿಕಾರಿಗಳನ್ನ ಸಸ್ಪೆಂಡ್ ಮಾಡಿದ್ದಾರೆ. ಸಿಎಂ ರಾಜಕೀಯ ಕಾರ್ಯದರ್ಶಿಯ ನೇಮಕ ಹಿಂಪಡೆಯಲಾಗಿದೆ. ಸಿಎಂ, ಡಿಸಿಎಂ ಇಬ್ರೂ ಚೆನ್ನಾಗಿ ಕೆಲಸ ಮಾಡ್ತಿದ್ದಾರೆ. ಇವೆಲ್ಲ ಆಕಸ್ಮಿಕ ಘಟನೆ, ನಾವೂ ಕೂಡ ನೋವಲ್ಲಿ ಇದ್ದೇವೆ. ಗೊಂದಲ ಸೃಷ್ಟಿ ಮಾಡಬಾರದು ಎಂದು ಹೇಳಿದರು.