ನವದೆಹಲಿ: ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಶುಕ್ರವಾರ ರಾತ್ರಿ 11.40 ರ ಸುಮಾರಿಗೆ ಪಾಟ್ನಾದ ಗಾಂಧಿ ಮೈದಾನದಲ್ಲಿರುವ ತಮ್ಮ ನಿವಾಸದಲ್ಲಿ ಕಾರಿನಿಂದ ಇಳಿಯುತ್ತಿದ್ದಾಗ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಅವರ ಮೇಲೆ ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಗೆ ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಅವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.
ಕುಂಬಳಕಾಯಿ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಕಣ್ಣು, ಚರ್ಮ, ಕೂದಲು ಎಲ್ಲದಕ್ಕೂ ಮದ್ದು!
ಇನ್ನು ಘಟನೆಯ ನಂತರ ಸ್ಥಳಕ್ಕೆ ಧಾವಿಸಿದ ಪೊಲೀಸರು, ಗುಂಡು ಮತ್ತು ಶೆಲ್ ಕವಚವನ್ನು ವಶಪಡಿಸಿಕೊಂಡಿದ್ದಾರೆ. ಇನ್ನು ಈ ಬಗ್ಗೆ ಮಾತನಾಡಿದ ನಗರ ಕೇಂದ್ರ ಎಸ್‌ಪಿ ದೀಕ್ಷಾ, ಜುಲೈ 4 ರ ರಾತ್ರಿ, ರಾತ್ರಿ 11 ಗಂಟೆ ಸುಮಾರಿಗೆ, ಗಾಂಧಿ ಮೈದಾನ ದಕ್ಷಿಣ ಪ್ರದೇಶದಲ್ಲಿ ಈ ಗುಂಡಿನ ದಾಳಿ ನಡೆಸಲಾಗಿದೆ.
ಉದ್ಯಮಿ ಹಾಗೂ ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಅವರನ್ನು ಟಾರ್ಗೆಟ್ ಮಾಡಿ ಈ ದಾಳಿಯನ್ನು ನಡೆಸಲಾಗಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ನಮ್ಮ ತಂಡ ಸ್ಥಳಕ್ಕೆ ಹಾಗೂ ಆಸ್ಪತ್ರೆಗೆ ಬಂದಿದ್ದಾರೆ. ಇನ್ನು ಅವರನ್ನು ಆಸ್ಪತ್ರೆಗೆ ಸ್ಥಳೀಯರು ಸಾಗಿಸಿದ್ದಾರೆ. ಇದೀಗ ತನಿಖೆ ಆರಂಭಿಸಲಾಗಿದೆ. ಇದರ ಜತೆಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಕೂಡ ವಶ ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.