ಕಲಬುರಗಿ:- ಜಾತಿ ನಿಂದನೆ ಕೇಸ್ ದಾಖಲಾದ ಬೆನ್ನಲ್ಲೇ ತಮ್ಮ ಹೇಳಿಕೆಗೆ ಬಿಜೆಪಿ MLC ರವಿಕುಮಾರ ಅವರು ವಿಷಾದ ವ್ಯಕ್ತಡಿಸಿದರು.
ಇಡ್ಲಿ- ದೋಸೆ ಹಿಟ್ಟು ಹುಳಿ ಆಗುವುದನ್ನು ತಡೆಯಲು ಈ ಟಿಪ್ಸ್ ಫಾಲೋ ಮಾಡಿ!
ಕಲಬುರಗಿ ಚಲೋ” ಪ್ರತಿಭಟನೆ ವೇಳೆ ಆಯೋಜಿಸಲಾದ ಪ್ರತಿಭಟನಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರವಿಕುಮಾರ್, ಜಿಲ್ಲಾಡಳಿತವು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಪ್ರಭಾವದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದ್ದರು.ಈ ವೇಳೆ “ಜಿಲ್ಲಾಧಿಕಾರಿ ಪಾಕಿಸ್ತಾನದಿಂದ ಬಂದಿದ್ದಾರೆಯೆ” ಎಂದು ಹೇಳಿದ್ದರು. ಈ ಸಂಬಂಧ ರವಿಕುಮಾರ್ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಾಗಿದೆ. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ರವಿಕುಮಾರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ತಮ್ಮ ಅಜಾಗರೂಕ ಟೀಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.
ಬಿಜೆಪಿ MLC ರವಿಕುಮಾರ್ ಮೇ 24ರಂದು ಪ್ರಿಯಾಂಕ್ ಖರ್ಗೆ ವಿರುದ್ಧದ ಪ್ರತಿಭಟನೆ ವೇಳೆ ಕಲಬುರಗಿ ಡಿಸಿ ಫೌಜಿಯಾ ತರನ್ನುಮ್ ಪಾಕಿಸ್ತಾನದಿಂದ ಬಂದಿದ್ದಾರೆಯೇ ಎಂದಿದ್ದರು. ಇದಕ್ಕೆ ಇದೀಗ ಕರ್ನಾಟಕ ಐಎಎಸ್ ಅಧಿಕಾರಿಗಳ ಸಂಘ ಖಂಡಿಸಿದೆ. ಮಾಧ್ಯಮ ಪ್ರಕಟಣೆ ಬಿಡುಗಡೆ ಮೂಲಕ ರವಿಕುಮಾರ್ ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದೆ.
ಕರ್ನಾಟಕ ಐಎಎಸ್ ಸಂಘ ಖಂಡನೆ, ಅಟ್ರಾಸಿಟಿ ಕೇಸ್ ದಾಖಲಾದ ಬೆನ್ನಲ್ಲೇ ರವಿ ಕುಮಾರ್ ಅವರು ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ರವಿಕುಮಾರ್, ನನ್ನ ಅಜಾಗರೂಕ ಟೀಕೆಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ನಾನು ಆ ಹೇಳಿಕೆಯನ್ನು ಕೂಡಲೇ ಹಿಂದಕ್ಕೆ ಪಡೆದಿದ್ದೇನೆ.ಜಿಲ್ಲಾಧಿಕಾರಿ ಅತ್ಯಂತ ಗೌರವಪಾತ್ರರು. ಅದು ನಾನು ಉದ್ದೇಶಪೂರ್ವಕವಾಗಿ ನೀಡಿದ ಹೇಳಿಕೆ ಅಲ್ಲ. ಅದು ಬಾಯಿ ತಪ್ಪಿನಿಂದ ಬಂದ ಹೇಳಿಕೆ. ಅಂದು ನಾನು ಆಡಿದ ಹೇಳಿಕೆಗೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.