ಹುಬ್ಬಳ್ಳಿ: ಬಿಜೆಪಿಯವರು ಹಳೆಯದನ್ನು ಹೊಸದಾಗಿ, ಹೊಸದನ್ನು ಹಳೆಯದನ್ನಾಗಿ ಮಾಡ್ತಾರೆ. ಕೊಲೆಯಾದ ಸುಹಾಸ್ ಶೆಟ್ಟಿ ಪರಿಹಾರದಲ್ಲಿ ಸರ್ಕಾರದಿಂದ ತಾರತಮ್ಯ ನಡೆದಿಲ್ಲ. ಬಿಜೆಪಿಯವರು ಎಲ್ಲವನ್ನೂ ಉಲ್ಟಾ ಪಲ್ಟಿ ಮಾಡ್ತಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಆರೋಪಿ ಮನೆಗೆ ಕಾಂಗ್ರೆಸ್ ನಾಯಕರು ಭೇಟಿ ಕೊಟ್ಟಿಲ್ಲ. ಪ್ರಕರಣ ದಾಖಲಾಗಿದೆ, ತನಿಖೆ ಮಾಡ್ತಿದ್ದಾರೆ. ಈಗಾಗಲೇ 6 ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೂ ಇಬ್ಬರನ್ನು ಬಂಧಿಸಬೇಕಿದೆ ಎಂದರು.
ಮಗು ಆದ್ಮೇಲೆ Hair Fall ಜಾಸ್ತಿ ಆಗಿದ್ಯಾ!? ಹಾಗಿದ್ರೆ ತಪ್ಪದೇ ಆಹಾರದಲ್ಲಿ ಈ ವಸ್ತು ಸೇರಿಸಿ!
ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಡ್ತಿಲ್ಲ ಎಂಬ ಆರೋಪಕ್ಕೆ ಕಿಡಿಕಾರಿದ ಅವರು, ಫ್ರೀ ಹ್ಯಾಂಡ್ ಕೊಟ್ಟಿದ್ದರಿಂದಲೇ ಆರೋಪಿಗಳನ್ನು ತಕ್ಷಣ ಬಂಧಿಸುವಸಂತಾಗಿದೆ. ಹಿಂದೂ ಮುಸ್ಲಿಂ ಅಂತ ಯಾರನ್ನು ಟಾರ್ಗೆಟ್ ಮಾಡಲು ಬರಲ್ಲ. ಘಟನೆ ನಡೆದಿದೆ, ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದರು.
ಸುಹಾಸ್ ಶೆಟ್ಟಿ ಜೊತೆಗೆ ಇತರೆ ಕೆಲವರ ಕೊಲೆಗೆ ಬೆದರಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಯಾರಿಗೆ ಬೆದರಿಕೆ ಇದೆಯೋ ಅವರು ಪೊಲೀಸರಿಗೆ ದೂರು ನೀಡಬೇಕು ಎಂದ ಅವರು, ನೀಟ್ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ವಿಚಾರವಾಗಿ ಮಾತನಾಡಿದ ಅವರು, ಯಾವುದಾದರೂ ಒಂದು ಘಟನೆ ನಡೆದಿರಬಹುದು. ಕಳೆದ ಬಾರಿ ನಡೆದಿದ್ದ ಘಟನೆ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರದ ಸಂಸ್ಥೆಗಳಲ್ಲಿ ಈ ಘಟನೆ ನಡೆದಿಲ್ಲ. ಈ ವಿಚಾರಕ್ಕೆ ನಮ್ಮ ಸರ್ಕಾರವನ್ನು ಹೊಣೆ ಮಾಡಲು ಆಗಲ್ಲ ಎಂದರು.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಲ್ಲಿ ವಿಚಾರದಲ್ಲಿ ಸದ್ಯಕ್ಕೆ ಯಾವುದೇ ಬದಲಾವಣೆಗಳಿಲ್ಲ. ನಾನು ಕೆಪಿಸಿಸಿ ಅಧ್ಯಕ್ಷನಾಗ ಬೇಕು ಅನ್ನೋದು ನನ್ನ ವಿವೇಚನೆಗೆ ಬಿಟ್ಟಿದ್ದಲ್ಲ. ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು. ಕೆ.ಪಿ.ಎಸ್.ಸಿ ಯಲ್ಲಿ ಗೊಂದಲ ಮುಂದಿರುವ ವಿಚಾರ ಎಲ್ಲ ಸರ್ಕಾರಗಳ ಸಂದರ್ಭದಲ್ಲಿಯೂ ಈ ರೀತಿಯ ಗೊಂದಲಗಳಾಗಿವೆ. ಕೆಪಿಎಸ್ಸಿ ಸ್ವತಂತ್ರ ಆಯೋಗವಿದ್ದು, ಇದನ್ನು ಅವರೇ ಸರಿಮಾಡಬೇಕು ಎಂದು ಅವರು ಸಲಹೆ ನೀಡಿದರು.