ಬೆಂಗಳೂರು:- ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡ ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ವಿನಯ್ ಸೋಮಯ್ಯ ಆತ್ಮಹತ್ಯೆ ಕೇಸ್ ಸಿಬಿಐಗೆ ವಹಿಸುವ ಅಗತ್ಯ ಇಲ್ಲ. ಬಿಜೆಪಿ ಅವರು ಆಗ್ರಹ ಮಾಡುತ್ತಿದ್ದಾರೆ. ಈಗಾಗಲೇ ತನಿಖೆ ನಡೆಯುತ್ತಿದೆ. ಸಿಬಿಐಗೆ ಕೊಡುವ ಅಗತ್ಯ ಏನೂ ಕಾಣಿಸುತ್ತಿಲ್ಲ. ನಮ್ಮ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಏನಾದರೂ ಲೋಪಗಳಾಗಿದ್ದರೆ ಗೊತ್ತಾಗುತ್ತದೆ. ಆಗ ಬೇರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸ್ಪಷ್ಟನೆ ನೀಡಿದರು.
ಶಾಸಕರ ಹೆಸರನ್ನು ಬಿಜೆಪಿಯವರು ಹೇಳುತ್ತಿದ್ದಾರೆ. ಎಫ್ಐಆರ್ನಲ್ಲಿ ಹೆಸರು ಬಿಟ್ಟಿದ್ದಾರೆ. ಡೆತ್ನೋಟ್ನಲ್ಲಿ ಶಾಸಕರ ಹೆಸರಿದೆ ಅಂತಿದ್ದಾರೆ. ಎಲ್ಲವನ್ನೂ ನೋಡುತ್ತೇವೆ. ಕಾನೂನು ಪ್ರಕಾರ ತನಿಖೆ ಮಾಡುತ್ತೇವೆ ಎಂದರು.
ಖರ್ಗೆ ಭೇಟಿ:-
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ ನೀಡಿದರು. ಸದಾಶಿವನಗರದ ಖರ್ಗೆ ನಿವಾಸಕ್ಕೆ ಭೇಟಿ ನೀಡಿದ ಪರಮೇಶ್ವರ್ ಗಂಟೆಗಳಿಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು.