ಗದಗ: ಹಳ್ಳದಲ್ಲಿ ಬೈಕ್ ಸಮೇತ ಕೊಚ್ಚಿ ಹೋದ ವ್ಯಕ್ತಿಯ ಮೃತದೇಹವು ಪತ್ತೆಯಾಗಿದೆ. ಗದಗ ತಾಲೂಕಿನ ಬೆನಕೊಪ್ಪ ಗ್ರಾಮದ ಹಳ್ಳದಲ್ಲಿ ಪತ್ತೆಯಾಗಿದ್ದು, ನಿನ್ನೆ ಸಾಯಂಕಾಲ ಹಳ್ಳದಲ್ಲಿ ಬೈಕ್ ಸಮೇತ ಕೊಚ್ಚಿಹೋಗಿದ್ದ ವ್ಯಕ್ತಿ ಸಾವನ್ನಪ್ಪಿದ್ದರು. ಹಿರೇಕೊಪ್ಪ ಗ್ರಾಮದ ಶರಣಪ್ಪ ಹಡಗಲಿ ಶರಣಪ್ಪ ಹಡಗಲಿ (39) ಮೃತ ದುರ್ದೈವಿಯಾಗಿದ್ದು,
Benefits of Peanut: ಬಡವರ ಬಾದಾಮಿ ಕಡಲೆ ಕಾಯಿಯಲ್ಲಿದೆ ಆರೋಗ್ಯದ ಗುಟ್ಟು..! ತಿಳಿದ್ರೆ ಶಾಕ್ ಆಗ್ತೀರಾ..
ಗದಗ ಜಿಲ್ಲೆಯ ಹಲವೆಡೆ ಮಂಗಳವಾರ ಭಾರಿ ಮಳೆ ಸುರಿದಿದ್ದು, ಚರಂಡಿಗಳೆಲ್ಲಾ ತುಂಬಿ ಹರಿಯುತ್ತಿತ್ತು. ಈ ವೇಳೆ ಜಾಸ್ತಿ ನೀರು ಇದ್ದ ಕಾರಣ ಹಳ್ಳ ನೋಡದೇ ಬೈಕ್ ಚಲಾಸಿದ ಸವಾರ ನೀರಲ್ಲಿ ಕೊಚ್ಚಿ ಹೋಗಿದ್ದ. ಗದಗ ತಾಲೂಕಿನ ಬೆನಕೊಪ್ಪ ಗ್ರಾಮದ ಹಳ್ಳದಲ್ಲಿ ಈ ಘಟನೆ ಜರುಗಿತ್ತು. ಪತ್ನಿಯ ತವರು ಮನೆ ಬೆನಕೊಪ್ಪಕ್ಕೆ ಶರಣಪ್ಪ ಹಡಗಲಿ ಅವರು ಹೊರಟ್ಟಿದ್ದ ವೇಳೆ ಈ ದುರಂತ ಸಂಭವಿಸಿದೆ.
ಇನ್ನೂ ಘಟನೆ ಸಂಬಂಧ ಮಾಹಿತಿ ಆಧರಿಸಿ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಕೊನೆಗೂ ಮೃತದೇಹ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ ಶರಣಪ್ಪ ಹಡಗಲಿಯನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.