ಇಸ್ಲಾಮಾಬಾದ್:- ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿರುವ ಶಾಂತಿ ಸಮಿತಿಯ ಕಚೇರಿಯ ಬಳಿ ಬಾಂಬ್ ಸ್ಫೋಟ ಸಂಭವಿಸಿದೆ. ಪರಿಣಾಮ 7 ಮಂದಿ ಸಾವನ್ನಪ್ಪಿದ್ದಾರೆ.
ಸ್ಫೋಟದ ತೀವ್ರತೆಗೆ ಕಚೇರಿಯೇ ಧ್ವಂಸವಾಗಿದೆ. ಘಟನೆಯಲ್ಲಿ ಗಾಯಗೊಂಡ 16 ಮಂದಿಯನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಈವರೆಗೆ ಯಾವುದೇ ಗುಂಪು ಬಾಂಬ್ ಸ್ಫೋಟದ ಹೊಣೆ ಹೊತ್ತುಕೊಂಡಿಲ್ಲ. ಮಾಹಿತಿ ಪಡೆದ ಬಳಿಕ ಸ್ಥಳೀಯ ರಕ್ಷಣಾ ಪಡೆಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಇನ್ನೂ ಅವಶೇಷಗಳ ಅಡಿ ಜನ ಸಿಲುಕಿರುವ ಸಾಧ್ಯತೆಗಳಿವೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ
ಸದ್ಯ ಆರ್ಥಿಕವಾಗಿ ಈಗಾಗಲೇ ತತ್ತರಿಸಿ ಹೋಗಿರುವ ಪಾಕಿಸ್ತಾನದ ಮೇಲೆ ಒಂದು ಕಡೆಯಿಂದ ಬಲೂಚಿಸ್ತಾನದ ಪ್ರತ್ಯೇಕತಾವಾದಿಗಳು ಮತ್ತೊಂದು ಕಡೆಯಿಂದ ತಾಲಿಬಾನ್ ಕಡೆಯಿಂದ ದಾಳಿ ನಡೆಯುತ್ತಿದೆ. ಬಲೂಚಿಸ್ತಾನ, ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ – ಬಲೂಚಿಸ್ತಾನ ಲಿಬರೇಷನ್ ಆರ್ಮಿ ಬಂಡುಕೋರರು ಸೇನೆಯನ್ನು ಗುರಿಯಾಗಿಸಿಕೊಂಡು ನಿರಂತರ ದಾಳಿ ನಡೆಸುತ್ತಲೇ ಇದ್ದಾರೆ. ಇದರಿಂದ ಭಾರೀ ಸಂಖ್ಯೆಯಲ್ಲಿ ಸೈನಿಕರು ಮೃತಪಟ್ಟಿದ್ದು, ಸಾಮೂಹಿಕ ರಾಜೀನಾಮೆಗೆ ಮುಂದಾಗುತ್ತಿದ್ದಾರೆ