ಚಾಮರಾಜನಗರ : ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆ ಯಾರು ಆತಂಕಪಡುವ ಅಗತ್ಯ ಇಲ್ಲ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಪ್ರತಿಕ್ರಿಯಿಸಿದ್ದಾರೆ.
ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಾಂಬ್ ಇಟ್ಟಿರುವುದಾಗಿ ನಮಗೆ ಮೇಲ್ ಬಂದಿದೆ. ಸೆನ್ ಠಾಣೆಗೆ ದೂರು ನೀಡಿದ್ದೇವೆ. ರಾಜ್ಯ ಮಟ್ಟದ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ನೌಕರರನ್ನು ಹೊರಗೆ ಕಳಿಸಿದ್ದೇವೆ. ಜಿಲ್ಲಾಡಳಿತ ಭವನದಲ್ಲಿ ತಪಾಸಣೆ ಮಾಡಲಾಗುತ್ತಿದೆ ಸಾರ್ವಜನಿಕರು ಮಧ್ಯಾಹ್ನ 3 ನಂತರ ಡಿಸಿ ಕಚೇರಿಗೆ ಬರಬಹುದು ಎಂದರು.
ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ ಕರೆ ; ತೀವ್ರ ಪರಿಶೀಲನೆ
ಇನ್ನೂ ಚಾಮರಾಜನಗರ ಎಸ್ಪಿ ಡಾ ಕವಿತಾ ಅವರು ಮಾತನಾಡಿ, ಡಿಸಿ ಕಚೇರಿಗೆ ಮೇಲ್ ಬಂದಿದೆ. ಮೂರು ಗಂಟೆಯೊಳಗೆ ಖಾಲಿ ಮಾಡಬೇಕು, ಮದ್ಯಾಹ್ನ 3 ಗಂಟೆಯೊಳಗೆ ಬಾಂಬ್ ಬ್ಲಾಸ್ಟ್ ಮಾಡ್ತೀವಿ ಅಂತ ಮೇಲ್ ನಲ್ಲಿ ತಿಳಿಸಲಾಗಿದೆ. ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ನೌಕರರನ್ನು ಸಾರ್ವಜನಿಕರನ್ನು ಡಿಸಿ ಕಚೇರಿಯಿಂದ ಹೊರ ಕಳಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಿಂದ ಶೋಧ ಕಾರ್ಯ ನಡೆಸಲಾಗಿದೆ. ಎಲ್ಲ ಆಯಾಮಗಳಲ್ಲು ತನಿಖೆ ನಡೆಸಲಾಗುತ್ತಿದೆ. ಡಿಸಿ ಕಚೇರಿಯಷ್ಟೇ ಅಲ್ಲ ಸುತ್ತಮುತ್ತ ಪ್ರದೇಶದ ಕಟ್ಟಡಗಳಲ್ಲು ತಪಾಸಣೆ ನಡೆಸಲಾಗುವುದು ಎಂದರು.