ಹುಬ್ಬಳ್ಳಿ: ಕಾಶ್ಮೀರದ ಪೆಹಲ್ಗಾಂನಲ್ಲಿ ಉಗ್ರಗಾಮಿಗಳು ನಡೆಸಿದ ದಾಳಿ ಕೃತ್ಯವನ್ನು ಖಂಡಿಸಿ, ಹುಬ್ಬಳ್ಳಿಯಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ನಗರದ ಸಂಗೊಳ್ಳಿ ರಾಯಣ್ಣನ ವೃತ್ತದಲ್ಲಿಂದು ಪ್ರತಿಭಟನೆ ಮಾಡಿದರು.
ಉಗ್ರಗಾಮಿಗಳು ತಮ್ಮ ಉಗ್ರ ಕೃತ್ಯವನ್ನು ಪ್ರದರ್ಶಿಸಿ ದೇಶದ ಪ್ರವಾಸಿಗರ ಮೇಲೆ ಹಾಗೂ ಹಿಂದೂಗಳೆಂದು ಕೇಳಿ ದಾಳಿ ಮಾಡಿ ಹತ್ಯೆಗೈದಿರುವುದು ಖಂಡನಾರ್ಹ. ಅಲ್ಲದೇ ಸರ್ಕಾರ ಭಯೋತ್ಪಾದನಾ ಚಟುವಟಿಕೆಯನ್ನು ಹತ್ತಿಕ್ಕಲು ಇನ್ನೂ ಹೆಚ್ಚಿನ ಕಾರ್ಯತಂತ್ರವನ್ನು ರೂಪಿಸಬೇಕು ಎಂದು ಬ್ರಾಹ್ಮಣ ಮಹಾಸಭಾ ಒತ್ತಾಯಿಸಿತು.
Mango Benefits: ನಿಮಗೆ ಗೊತ್ತೆ..? ತೂಕ ಹೆಚ್ಚಾಗುವುದನ್ನು ತಡೆಯುತ್ತವಂತೆ ಮಾವಿನ ಹಣ್ಣು!
ಇನ್ನೂ ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ ಶಿವಮೊಗ್ಗ, ಬೀದರ ಹಾಗೂ ಧಾರವಾಡದ ಪರೀಕ್ಷಾ ಕೇಂದ್ರಗಳಲ್ಲಿ ವಿಪ್ರ ವಿದ್ಯಾರ್ಥಿಗಳ ಜನಿವಾರವನ್ನು ತುಂಡರಿಸಿದ್ದನ್ನು ಖಂಡಿಸಿದ ಪ್ರತಿಭಟನಾಕಾರರು, ಪರೀಕ್ಷೆ ಬರೆಯಲು ಹೋದಾಗ ಪರೀಕ್ಷಾ ನೀತಿ ನಿಯಮಗಳಿಗೆ ವಿರುದ್ಧವಾಗಿ ಅಧಿಕಾರಿಗಳು ಪರೀಕ್ಷೆ ಬರೆಯಲ್ಪಡುವ ವಿದ್ಯಾರ್ಥಿಗಳ ಜನಿವಾರವನ್ನು ಕಟ್ಟು ಮಾಡಿ ಧಾರ್ಮಿಕ ಸ್ವಾತಂತ್ರ್ಯವನ್ನು ಮತ್ತು ಭಾವನಾತ್ಮಕ ವಿಷಯಗಳಿಗೆ ಧಕ್ಕೆಯನ್ನುಂಟು ಆಗಿದೆ. ಶೋಷಣೆಗೊಳಗಾದ ವಿದ್ಯಾರ್ಥಿಗಳಿಗೆ ಸೂಕ್ತವಾದ ಕಾಲೇಜಿನಲ್ಲಿ ಪ್ರವೇಶ ಕೊಡುವುದರೊಂದಿಗೆ ನ್ಯಾಯದೊರಕಿಸಿ ಕೊಡಬೇಕೆಂದು ಸರ್ಕಾರಕ್ಕೆ ಆಗ್ರಹಪಡಿಸುತ್ತೇವೆಂದು ಒತ್ತಾಯಿಸಿದರು.