ಶಿವಮೊಗ್ಗ: ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆಗೆ ಪ್ರವೇಶ ನೀಡದ ಪ್ರಕರಣ ಸಂಬಂಧ ಇದೀಗ ದೂರು ದಾಖಲಾಗಿದೆ. ಸಿಇಟಿ ಪರೀಕ್ಷೆಯ ಅಧಿಕಾರಿ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.
ಏಪ್ರಿಲ್ 16 ರಂದು ನಡೆದಿದ್ದ ಸಿಇಟಿ ಪರೀಕ್ಷೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಕತ್ತರಿಸಿದ್ದಾರೆ. ಆದರೆ ಪರೀಕ್ಷಾ ವಿಚಾರದಲ್ಲಿ ಜನಿವಾರ ಕತ್ತರಿಸಬೇಕೆಂಬ ನಿಯಮವಿಲ್ಲ. ಕಾಲೇಜಿನ ಭದ್ರತಾ ಸಿಬ್ಬಂದಿ ಜನಿವಾರ ಕತ್ತರಿಸಿ ಬ್ರಾಹ್ಮಣ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ ಎಂದು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ನಟರಾಜ್ ಭಾಗವತ್ ಪೊಲೀಸರಿಗೆ ದೂರು ನೀಡಿದ್ದಾರೆ.
ಜನಿವಾರ ಧರಿಸಿದ್ದಕ್ಕೆ ಪರೀಕ್ಷೆಗೆ ನಿರಾಕರಿಸಿದ್ದು ತಪ್ಪು ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ್ದರಿಂದ ಬ್ರಾಹ್ಮಣ ಸಮುದಾಯಕ್ಕೆ ಅಪಮಾನವಾಗಿದೆ. ಇದರಿಂದ ಸಿಇಟಿ ಪರೀಕ್ಷೆಯ ಭದ್ರತೆ ನೋಡಿಕೊಳ್ಳುತ್ತಿರುವ ಅಧಿಕಾರಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಕಳೆದ ರಾತ್ರಿ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.