ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆ ಪಂಜಾಬ್ ಆಟಗಾರ ಗ್ಲೆನ್ ಮ್ಯಾಕ್ಸ್ ವೆಲ್ ಗೆ ಭಾರೀ ದಂಡ ವಿಧಿಸಲಾಗಿದೆ.
ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್ ; ವ್ಯಕ್ತಿ ಸಾವು
ಏ.8 ರಂದು ಪಂಜಾಬ್ನ ಮಹಾರಾಜ ಯದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆದ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆ ಬಿಸಿಸಿಐ ಪಂದ್ಯದ ಶೇ.25 ರಷ್ಟು ಶುಲ್ಕ ಪಾವತಿಸುವಂತೆ ದಂಡ ಹಾಗೂ ಒಂದು ಡಿಮೆರಿಟ್ ಪಾಯಿಂಟ್ ನೀಡಿದ್ದು, ಈ ಸೀಸನ್ನಲ್ಲಿ ದಂಡಕ್ಕೆ ಒಳಗಾದ ಆರನೇ ಆಟಗಾರರಾಗಿದ್ದಾರೆ.
ನೀತಿ ಸಂಹಿತೆ ಉಲ್ಲಂಘಿಸಿದ ಕುರಿತು ಬಿಸಿಸಿಐ ನಿರ್ದಿಷ್ಟ ಕಾರಣ ತಿಳಿಸಿಲ್ಲವಾದರೂ, ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.2ರ ಅಡಿಯಲ್ಲಿ ಲೆವೆಲ್ 1 ಅಪರಾಧವನ್ನು ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ ಹಾಗೂ ಮ್ಯಾಚ್ ರೆಫರಿಯ ಶಿಕ್ಷೆಯನ್ನು ಸ್ವೀಕರಿಸಿದ್ದಾರೆ ಎಂದು ತಿಳಿಸಿದೆ.