ರಾಮನಗರ :- ಬಾಗಿಲು ಮುರಿದು ಚಿನ್ನಾಭರಣ, ಬೆಳ್ಳಿ ಕಳ್ಳತನ ಮಾಡಿದ್ದ ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಚಿಕ್ಕೋಡಿ| SSLC ಪರೀಕ್ಷೆಯಲ್ಲಿ ಭಾರೀ ನಕಲು: ಇಲ್ಲಿ ಹೇಳೋರಿಲ್ಲ, ಕೇಳೋರಿಲ್ಲ ಸ್ವಾಮಿ!
ಸಾಧಿಕ್, ಖಾಲಿದ್, ಹಂಜಾ ಹಾಗೂ ಚೂರಿಕಟ್ಟೆ ಶಿವ ಬಂಧಿತರು. ಬಂಧಿತರಿಂದ 4 ಕೋಟಿ ರೂ. ಮೌಲ್ಯದ 5 ಕೆಜಿ 500 ಗ್ರಾಂ ಚಿನ್ನಾಭರಣ, ನಗದು ಹಾಗೂ 1 ಆಲ್ಟೋ ಕಾರನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಸಾಧಿಕ್ ತನ್ನ ಸಹಚರರೊಂದಿಗೆ ಸೇರಿ ಕಾರಿನಲ್ಲಿ ಬಂದು, ಬೀಗ ಹಾಕಿದ ಮನೆಗಳನ್ನು ಗುರುತಿಸಿ, ಮನೆಯಲ್ಲಿ ಯಾರೂ ಇಲ್ಲವೆಂದು ಖಚಿತಪಡಿಸಿಕೊಂಡು ಬಳಿಕ ರಾತ್ರಿ ವೇಳೆ ಮನೆಯ ಬಾಗಿಲು ಮುರಿದು ಕಳ್ಳತನ ಮಾಡುತ್ತಿದ್ದರು
ಈ ನಾಲ್ವರ ಗ್ಯಾಂಗ್ ತರೀಕೆರೆ, ಬೇಲೂರು, ಸಾಗರ ಟೌನ್, ಮೂಡಿಗೆರೆ, ಕೆ.ಆರ್.ಪೇಟೆ ಟೌನ್, ಮಂಡ್ಯ ಗ್ರಾಮಾಂತರ, ಹಳೇಬೀಡು, ಹೊಳೇನರಸಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 20ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.