ಬೆಳಗಾವಿ: 2006ರಲ್ಲಿ 500 ರೂ ಲಂಚ ಪಡೆದ ಆರೋಪದ ಮೇಲೆ 10 ವರ್ಷಗಳ ಬಳಿಕ ಜೈಲು ಶಿಕ್ಷೆಗೆ ಗುರಿಯಾಗಿರುವ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. 30 ವರ್ಷ ಹಿಂದೆ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ಲಕ್ಷ್ಮಣ ಕಟಾಂಬಳೆ ಅನ್ನೋರ ಬಳಿ 500 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ನಾಗೇಶ್ ಶಿವಂಗೇಕರ್ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದರು. 500 ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು.
ನಿಮಗೂ ಗ್ಯಾಸ್ಟ್ರಿಕ್ ಸಮಸ್ಯೆ ಇದ್ಯಾ!? ಹಾಗಿದ್ರೆ ಈ ಆಹಾರಗಳನ್ನು ತಪ್ಪದೇ ಸೇವಿಸಿ!
ಹೌದು 2006ರಲ್ಲಿ ಗ್ರಾಮ ಲೆಕ್ಕಾಧಿಕಾರಿಗೆ ಒಂದು ವರ್ಷ ಜೈಲು, 1 ಸಾವಿರ ದಂಡ ವಿಧಿಸಲಾಗಿತ್ತು. ಬಳಿಕ ಗ್ರಾಮ ಲೆಕ್ಕಾಧಿಕಾರಿ ನಾಗೇಶ ಧಾರವಾಡ ಹೈಕೋರ್ಟ್ ಮೋರೆ ಹೋಗಿದ್ದರು. ಹೈಕೋರ್ಟ್ನಲ್ಲಿ ನಾಗೇಶ ಶಿವಂಗೇಕರ್ಗೆ ರಿಲಿಫ್ ಸಿಕ್ಕಿತ್ತು. ಆದರೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಲೋಕಾಯುಕ್ತ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ಇಂದು ಸುಪ್ರೀಂ ಕೋರ್ಟ್ದಿಂದ ಲೋಕಾಯುಕ್ತ ಪರ ತೀರ್ಪು ಪ್ರಕಟವಾಗಿದ್ದು, ಕೆಲಸದಿಂದ ನಿವೃತ್ತಯಾಗಿ 10 ವರ್ಷದ ಬಳಿಕ ಆರೋಪಿ ಮತ್ತೆ ಜೈಲು ಪಾಲಾಗಿದ್ದಾರೆ. ಸದ್ಯ ಬೆಳಗಾವಿ ಹಿಂಡಲಗಾ ಜೈಲಿಗೆ ನಾಗೇಶ್ ಶಿವಂಗೇಕರ್ನ್ನು ಲೋಕಾಯುಕ್ತ ಪೊಲೀಸರು ರವಾನಿಸಿದ್ದಾರೆ.