ಬೀದರ್: ತಂಗಿಯ ಪ್ರೀತಿಸಿದ ಎಂಬ ಕಾರಣಕ್ಕೆ ಯುವಕನನ್ನೇ ಹತ್ಯೆಗೈದ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಿರಗೂಡಿ ಗ್ರಾಮದಲ್ಲಿ ನಡೆದಿದೆ.
25 ವರ್ಷದ ಪ್ರಶಾಂತ್ ಬಿರಾದರ್ ಬರ್ಬರವಾಗಿ ಕೊಲೆಯಾಗಿದ್ದಾನೆ. ಮೃತ ಯುವಕ ಮತ್ತು ಆರೋಪಿಗಳ ಸಹೋದರಿ ಪ್ರೀತಿ ನಡುವೆ ಕೆಲ ವರ್ಷಗಳಿಂದ ಪ್ರೇಮಾಂಕುರವಾಗಿತ್ತು. ಇದೇ ವಿಚಾರಕ್ಕೆ ಶುಕ್ರವಾರ ರಾತ್ರಿ ನಿರಗುಡಿ ಗ್ರಾಮದಲ್ಲಿ ಮೃತ ಪ್ರಶಾಂತ ಹಾಗೂ ಯುವತಿ ಸಹೋದರರ ನಡುವೆ ಗಲಾಟೆಯಾಗಿದೆ. ಗಲಾಟೆ ವೇಳೆ ಪ್ರಶಾಂತ್ ತಲೆ ಮೇಲೆ ಕಲ್ಲು ಹಾಕಿ ಸಹೋದರರು ಬರ್ಬರವಾಗಿ ಹತ್ಯೆಗೈದಿದ್ದಾರೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ನ್ಯಾಮೇಗೌಡ, ಸಿಪಿಐ ಅಲಿಸಾಬ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಘಟನೆ ಸಂಬಂಧ ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆ ಮಾಡಿದ ಯಲ್ಲಾಲಿಂಗ ಮೇತ್ರೆ, ಪ್ರಶಾಂತ್ ಮೇತ್ರೆ ಎಂಬ ಇಬ್ಬರು ಸಹೋದರರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.