ಕೋಲಾರ:– ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 20 ಜನ ಪ್ರಯಾಣಿಕರು ಸ್ವಲ್ಪದರಲ್ಲೇ ಬಚಾವ್ ಆಗಿರುವ ಘಟನೆ ಜರುಗಿದೆ.
ಕೆಜಿಎಫ್ನ ಬೆಮೆಲ್ ನಗರ ಬಳಿ ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಗೆ ಸೇರಿದ ಬಸ್ ಅಪಘಾತಕ್ಕೀಡಾಗಿ 8 ಮಂದಿ ಗಾಯಗೊಂಡಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಬಸ್ ಡಿವೈಡರ್ಗೆ ಡಿಕ್ಕಿಯಾಗಿದೆ. ಈ ವೇಳೆ ಬಸ್ನಲ್ಲಿ 20 ಜನ ಇದ್ದರು. ಅದೃಷ್ಟವಶಾತ್, ಬಸ್ನಲ್ಲಿದ್ದವರಿಗೆ ಗಂಭೀರ ಸ್ವರೂಪದ ಗಾಯಗಳಾಗಿಲ್ಲ. ಗಾಯಾಳುಗಳನ್ನು ಕೆಜಿಎಫ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೊದಲ ಪಾಳಿಯ ಕಾರ್ಮಿಕರನ್ನು ಕರೆದುಕೊಂಡು ಹೋಗುವ ವೇಳೆ ಅಪಘಾತ ಸಂಭವಿಸಿದೆ.