Close Menu
Ain Live News
    Facebook X (Twitter) Instagram YouTube
    Friday, June 20
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮೆಟ್ರೋ 3ನೇ ಯೋಜನೆಗೆ ಸಚಿವ ಸಂಪುಟ ಅನುಮತಿ; ರಾಮನಗರ ಜಿಲ್ಲೆ ಈಗ ಬೆಂಗಳೂರು ದಕ್ಷಿಣ – ಡಿಕೆಶಿ!

    By AIN AuthorMay 22, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- “ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದ್ದು, ಇನ್ನುಮುಂದೆ ಈ ಜಿಲ್ಲೆಯು ಬೆಂಗಳೂರು ದಕ್ಷಿಣ ಎಂದು ಕರೆಯಲ್ಪಡುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

    ಹುಬ್ಬಳ್ಳಿ: 73 ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಸಮಿತಿ ಸಭೆ!

    ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಗುರುವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

    “ರಾಮನಗರ ಜಿಲ್ಲಾ ಕೇಂದ್ರವಾಗಿಯೇ ಮುಂದುವರಿಯಲಿದೆ. ಕೇವಲ ಜಿಲ್ಲೆಯ ಹೆಸರನ್ನು ಮಾತ್ರ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲಾಗಿದೆ. ಈ ಹಿಂದೆ ಇದು ಬೆಂಗಳೂರು ಜಿಲ್ಲೆಯಾಗಿತ್ತು. ಆಡಳಿತಾತ್ಮಕ ದೃಷ್ಟಿಯಿಂದ ಈ ಹೆಸರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಲಾಗಿದೆ. ಈ ಮರುನಾಮಕರಣ ಮಾಡುತ್ತಿರುವ ವಿಚಾರವನ್ನು ತಿಳಿಸಲು ಸಂತೋಷವಾಗುತ್ತಿದೆ” ಎಂದು ತಿಳಿಸಿದರು.

    ಬಿಡಿಎ ನಿವೇಶನದಾರರ ತೆರಿಗೆ ಬಡ್ಡಿ ವಿನಾಯಿತಿಗೆ ಒಟಿಎಸ್

    “ಬೆಂಗಳೂರಿನಲ್ಲಿ ಅನೇಕ ಸಂಘ ಸಂಸ್ಥೆಗಳು, ದೇವಾಲಯಗಳು ಬಿಡಿಎ ವ್ಯಾಪ್ತಿಯಲ್ಲಿ ನಿವೇಶನ ತೆಗೆದುಕೊಂಡಿದ್ದು, ಅವರಿಗೆ ಒನ್ ಟೈಮ್ ಇನ್ಟ್ರೆಸ್ಟ್ ಬೆನಿಫಿಟ್ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದ್ದೇವೆ. 125 ದಿನಗಳ ಒಳಗಾಗಿ ಅವರು ಬಾಕಿ ಇರುವ ತೆರಿಗೆ ಪಾವತಿಸಿದರೆ ಬಡ್ಡಿ ವಿನಾಯಿತಿ ನೀಡಲಾಗುವುದು” ಎಂದು ತಿಳಿಸಿದರು.

    ಮೆಟ್ರೋ ಮೂರನೇ ಹಂತಕ್ಕೆ ಅನುಮತಿ

    “ಇನ್ನು ಟನಲ್ ವಿಚಾರವಾಗಿ ಟೆಂಡರ್ ಕರೆಯುವ ವಿಚಾರವಾಗಿ ಚರ್ಚೆ ಮಾಡಲಾಗಿದೆ. ಹೈಬ್ರಿಡ್ ಮಾದರಿಯಲ್ಲಿ ಮಾಡಬೇಕೇ ಅಥವಾ ಬೇಡವೇ ಎಂಬುದನ್ನು ಸಿಎಂ ಜತೆ ತಾಂತ್ರಿಕ ಅಂಶ ಚರ್ಚಿಸಿ ತೀರ್ಮಾನ ಮಾಡುತ್ತೇವೆ. ಈ ಟೆಂಡರ್ ಜಾಗತಿಕ ಟೆಂಡರ್ ಆಗಿರಲಿದೆ. ಮೆಟ್ರೋ ವಿಚಾರವಾಗಿ ಮೂರನೇ ಹಂತದ ಮೆಟ್ರೋ ಯೋಜನೆಗೆ ಅಂದಾಜು ವೆಚ್ಚ ₹40,424 ಕೋಟಿಗೆ ಅನುಮತಿ ನೀಡಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಾರಂಭ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

    ಕಸ ವಿಲೇವಾರಿಗೆ 33 ಪ್ಯಾಕೇಜ್

    “ಈ ಹಿಂದೆ ಬಿಜೆಪಿ ಅವಧಿಯಲ್ಲಿ ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ ವಿಚಾರವಾಗಿ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದು, ನ್ಯಾಯಾಲಯ ಅವರ ಅರ್ಜಿಯನ್ನು ವಜಾಗೊಳಿಸಿ ಮುಂದಿನ ನಾಲ್ಕು ತಿಂಗಳಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಮಾಡುವಂತೆ ಈಗ ಕೋರ್ಟ್ ತೀರ್ಪು ನೀಡಿದೆ. ನಾವು ಪ್ರತಿ ಕ್ಷೇತ್ರದಲ್ಲೂ ಒಂದೊಂದು ಪ್ಯಾಕೇಜ್ ಮಾಡಲು ಮುಂದಾಗಿದ್ದು, ದೊಡ್ಡ ಕ್ಷೇತ್ರಗಳಲ್ಲಿ ಎರಡು ಪ್ಯಾಕೇಜ್ ಸೇರಿದಂತೆ 33 ಪ್ಯಾಕೇಜ್ ಮೂಲಕ ಕಸ ವಿಲೇವಾರಿ ಮಾಡಲಾಗುವುದು. ಈ ಕುರಿತ ಟೆಂಡರ್ ಶೀಘ್ರವೇ ಕರೆಯಲಾಗುವುದು. ಇದಕ್ಕಾಗಿ 7 ವರ್ಷಗಳ ಅವಧಿಗೆ ₹ 4,790 ಕೋಟಿ ವೆಚ್ಚದಲ್ಲಿ ಕಸ ವಿಲೇವಾರಿ ಯೋಜನೆ ಮಾಡಲಾಗುತ್ತಿದೆ. ಈಗಿರುವ ವ್ಯವಸ್ಥೆಗೂ, ಹೊಸ ವ್ಯವಸ್ಥೆಗೂ ಬೇಕಾದಷ್ಟು ವ್ಯತ್ಯಾಸಗಳಿವೆ. ಕಸ ವಿಂಗಡಣೆ, ವಾಹನಗಳ ಜವಾಬ್ದಾರಿ, ಕಟ್ಟಡ ತ್ಯಾಜ್ಯ ಪ್ರತ್ಯೇಕತೆ ಸೇರಿದಂತೆ ಅನೇಕ ಜವಾಬ್ದಾರಿ ನೀಡಲಾಗುವುದು” ಎಂದು ವಿವರಿಸಿದರು.

    ಕಾನೂನು ಚೌಕಟ್ಟಿನಲ್ಲಿ ಜಿಲ್ಲೆ ಮರುನಾಮಕರಣ

    ರಾಮನಗರ ಜಿಲ್ಲೆ ಮರುನಾಮಕರಣದ ಹೆಚ್ಚಿನ ಅನುಕೂಲಗಳೇನು, ಇದಕ್ಕೆ ತಗುಲುವ ವೆಚ್ಚ ಎಷ್ಟು ಎಂದು ಕೇಳಿದಾಗ, “ಈ ಬಗ್ಗೆ ಅಧಿಸೂಚನೆ ಹೊರಡಿಸಲಾಗುವುದು. ಇದಕ್ಕಾಗಿ ಯಾವುದೇ ಆರ್ಥಿಕ ಸಮಸ್ಯೆ ಇರುವುದಿಲ್ಲ. ನಮ್ಮದು ಮೊದಲು ಬೆಂಗಳೂರು ಜಿಲ್ಲೆಯಾಗಿತ್ತು. ನಾನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಅಧ್ಯಕ್ಷನಾಗಿದ್ದೆ. ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ರಾಮನಗರ, ಕನಕಪುರ, ಮಾಗಡಿ ಇವೆಲ್ಲವೂ ಬೆಂಗಳೂರಿನ ಭಾಗವಾಗಿತ್ತು. ಆ ಹೆಸರನ್ನು ಉಳಿಸಿಕೊಳ್ಳುವ ಕೆಲಸ ಮಾಡುತ್ತಿದ್ದೇವೆ. ಹೀಗಾಗಿ ಈ ಜಿಲ್ಲೆಯನ್ನು ಕಾನೂನು ಚೌಕಟ್ಟಿನಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ತೀರ್ಮಾನಿಸಿದೆ” ಎಂದು ತಿಳಿಸಿದರು.

    ಇದಕ್ಕೆ ಕೇಂದ್ರ ಸರ್ಕಾರ ವಿರೋಧಿಸಿತ್ತು ಎಂದು ಕೇಳಿದಾಗ, “ಈ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಯಾವುದೇ ಅಧಿಕಾರ ಇರುವುದಿಲ್ಲ. ಅವರಿಗೆ ಮಾಹಿತಿ ನೀಡುವ ಉದ್ದೇಶದಿಂದ ಅವರಿಗೆ ಪ್ರಸ್ತಾವನೆ ಕಳುಹಿಸಿದ್ದೆವು. ಆದರೆ ಕೆಲವರು ರಾಜಕೀಯ ಮಾಡುವ ಪ್ರಯತ್ನ ಮಾಡಿದರು. ಇದು ರಾಜ್ಯಕ್ಕೆ ಸಂಬಂಧಿಸಿದ ವಿಚಾರ. ಇದು ನಮ್ಮ ಹಕ್ಕು. ಗದಗ, ಚಾಮರಾಜನಗರ ಜಿಲ್ಲೆ ಸೇರಿದಂತೆ ಬೇರೆ ಜಿಲ್ಲೆಗಳನ್ನು ಮಾಡಿದ್ದೇವೆ. ರಾಮನಗರ ಜಿಲ್ಲೆ ಎಂದು ಮಾಡಿದಾಗ ಕೇಂದ್ರವನ್ನು ಕೇಳಿರಲಿಲ್ಲ. ಇನ್ನುಮುಂದೆ ಎಲ್ಲಾ ದಾಖಲೆಗಳಲ್ಲೂ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾವಣೆಯಾಗಲಿದೆ. ನನ್ನನ್ನು ನೀವೆಲ್ಲರೂ ಬೆಂಗಳೂರು ದಕ್ಷಿಣ ಜಿಲ್ಲೆಯವನು ಎಂದು ಕರೆಯಬೇಕು” ಎಂದು ತಿಳಿಸಿದರು.

    ಪರಮೇಶ್ವರ್ ಅವರ ಮೇಲೆ ಇಡಿ ದಾಳಿ ಬಗ್ಗೆ ನಿಮ್ಮ ಹೇಳಿಕೆಯಿಂದ ವಿವಾದ ಸೃಷ್ಟಿಯಾಗಿದೆ ಎಂದು ಕೇಳಿದಾಗ, “ನಾನು ವಿವಾದವಾಗುವಂತಹದ್ದು ಏನಿದೆ. ನಾನು ಪರಮೇಶ್ವರ್ ಅವರ ಬಳಿ ವಿಚಾರಿಸಿದೆ. ಅವರು ಯಾವುದೋ ಮದುವೆ ಸಂದರ್ಭದಲ್ಲಿ ನೀಡಿದ್ದಾರೆ ಎಂದು ಹೇಳಿದ್ದಾರೆ. ನಿನ್ನೆ ನೀವು ಈ ವಿಚಾರವಾಗಿ ಪ್ರಶ್ನೆ ಕೇಳಿದಾಗ, ನಾನು ಪರಮೇಶ್ವರ್ ಅವರಿಂದ ಮಾಹಿತಿ ಪಡೆದು ಪ್ರತಿಕ್ರಿಯೆ ನೀಡುವುದಾಗಿ ಹೇಳಿದ್ದೆ. ನಾನು ಪರಮೇಶ್ವರ್ ಅವರ ಬಳಿ ಚರ್ಚೆ ಮಾಡಿದಾಗ ನನಗೆ ತಿಳಿದ ವಿಚಾರ ಹೇಳಿದ್ದೇನೆ. ಇದರಲ್ಲಿ ವಿವಾದ ಮಾಡುವಂತಹದ್ದು ಏನಿದೆ?” ಎಂದು ಪ್ರಶ್ನಿಸಿದರು.

    ರನ್ಯಾ ರಾವ್ ಅವರು ಸ್ಮಗ್ಲಿಂಗ್ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ ಎಂದು ಕೇಳಿದಾಗ, “ಆಕೆ ಸ್ಮಗ್ಲಿಂಗ್ ಪ್ರಕರಣದಲ್ಲಿ ಆರೋಪಿಯಾಗಿರಬಹುದು. ಅದು ಕೋಟ್ಯಂತರ ರೂಪಾಯಿ ಹಗರಣ. ನಾವು ಅದರಲ್ಲಿ ಹಸ್ತಕ್ಷೇಪ ಮಾಡಲು ಬಯಸುವುದಿಲ್ಲ. ಅಥವಾ ಇಂತಹ ವಿಚಾರದಲ್ಲಿ ನಾನಾಗಲಿ, ಪರಮೇಶ್ವರ್ ಅವರಾಗಲಿ ಯಾರಿಗೂ ಬೆಂಬಲವನ್ನು ನೀಡುವುದಿಲ್ಲ. ಆಕೆ ಪರಮೇಶ್ವರ್ ಅವರ ಜತೆಗೆ ಕೆಲಸ ಮಾಡಿರುವ ಅಧಿಕಾರಿಯ ಪುತ್ರಿ. ಮದುವೆ ಸಂದರ್ಭದಲ್ಲಿ ಇವರು ಅವರಿಗೆ ಸಹಾಯ ಮಾಡಿರಬಹುದು. ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಈ ವಿಚಾರವಾಗಿ ಅವರನ್ನು ಕೇಳಿ ಮಾಹಿತಿ ಪಡೆಯುವುದು ನನ್ನ ಕರ್ತವ್ಯ. ನಾವು ಅನೇಕ ಟ್ರಸ್ಟ್ ನಡೆಸುತ್ತಿದ್ದೇವೆ. ನಾವು ಅನೇಕರಿಗೆ ದೇಣಿಗೆ ನೀಡಿದ್ದೇವೆ. ಅವರು ಅದೇ ರೀತಿ ಅವರು ನೀಡಿರಬಹುದು” ಎಂದರು.

    ಇದು ತಪ್ಪೊಪ್ಪಿಗೆಯ ಹೇಳಿಕೆ ಎಂಬ ಬಿಜೆಪಿ ಹೇಳಿಕೆ ಬಗ್ಗೆ ಕೇಳಿದಾಗ, “ಇಲ್ಲಿ ತಪ್ಪೊಪ್ಪಿಗೆ ಏನಿದೆ? 40 ಲಕ್ಷ ಹಣ ನೀಡಿರುವುದಾಗಿ ಅವರು ಒಪ್ಪಿಕೊಂಡಿದ್ದಾರೆ. ಅವರು ನೀಡಿಲ್ಲ ಎಂದು ನಿರಾಕರಿಸಿಲ್ಲ. ಆದರೆ ಯಾವ ಉದ್ದೇಶಕ್ಕೆ ನೀಡಿದ್ದಾರೆ ಎಂಬುದು ಮುಖ್ಯವಲ್ಲವೇ? ಅವರ ಕುಟುಂಬದಲ್ಲಿ ಮದುವೆ ನಡೆದ ಸಮಯದಲ್ಲಿ ನೆರವು ನೀಡಿದ್ದಾರೆ” ಎಂದು ತಿಳಿಸಿದರು.

    ಅತಿಯಾದ ಮಳೆ ನಂತರ ನಗರದಲ್ಲಿ ರಸ್ತೆಗುಂಡಿಗಳು ಹೆಚ್ಚಾಗಿವೆ ಎಂದು ಕೇಳಿದಾಗ, “ಈ ಹಿಂದೆ ರಸ್ತೆ ಗುಂಡಿ ಮುಚ್ಚಲು ವಿಶೇಷ ಕಾರ್ಯಕ್ರಮ ರೂಪಿಸಿದ್ದೆವು. ಸಧ್ಯದಲ್ಲೇ ಬೆಂಗಳೂರಿನ ಸ್ವಚ್ಛತೆ, ರಸ್ತೆ ಗುಂಡಿ ಸೇರಿದಂತೆ ಪ್ರಮುಖ ಮೂರು ತೀರ್ಮಾನಗಳನ್ನು ಮಾಡಲಿದ್ದೇವೆ. ಮಳೆ ಸಂಪೂರ್ಣವಾಗಿ ನಿಂತ ನಂತರ ರಸ್ತೆ ಗುಂಡಿ ಮುಚ್ಚಲಾಗುವುದು. ಒಂದೇ ಹಂತದಲ್ಲಿ ನಾವು ಬೆಂಗಳೂರಿನ ಕಸ ವಿಲೇವಾರಿಗೆ ಕಾರ್ಯಕ್ರಮ ರೂಪಿಸಲಾಗುವುದು” ಎಂದರು.

    Demo
    Share. Facebook Twitter LinkedIn Email WhatsApp

    Related Posts

    ಬಡವರು ಹಣ ಕೊಟ್ಟು ಮನೆ ತೆಗೆದುಕೊಳ್ಳುವ ದುಸ್ಥಿತಿ ನಿರ್ಮಾಣ ಆಗಿದೆ: ಬಿ.ಎಸ್. ಯಡಿಯೂರಪ್ಪ

    June 20, 2025

    ಬೆಂಗಳೂರಿನಲ್ಲಿ ಘೋರ ದುರಂತ: ಹೈಟೆನ್ಷನ್ ವೈರ್ ಸ್ಪರ್ಶಿಸಿ 10 ವರ್ಷದ ಬಾಲಕ ಸಾವು..!

    June 20, 2025

    BR ಪಾಟೀಲ್ ಆಡಿಯೋ ವೈರಲ್ ವಿಚಾರ: ಸಿಎಂ ಸಿದ್ದರಾಮಯ್ಯ ಬಣ್ಣ ಬಯಲು – ಪರಿಷತ್ ಶಾಸಕ ಟಿ.ಎ.ಶರವಣ ಆಕ್ರೋಶ

    June 20, 2025

    ಡಿಕೆಶಿಗೆ ಮನುಷ್ಯತ್ವದ ದಾರಿದ್ರ್ಯ ಇದೆ; ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವ ದಾರಿದ್ರ್ಯ ನನಗಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಕಿಡಿ

    June 20, 2025

    ಕೃಷಿಯಿಂದ ಹೆಚ್ಚು ಉದ್ಯೋಗ ಸೃಷ್ಟಿ- ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ: ಸಿಎಂ ಸಿದ್ದರಾಮಯ್ಯ

    June 20, 2025

    ರಾಷ್ಟ್ರಪತಿ ದ್ರೌಪದಿ ಮುರ್ಮು ಹುಟ್ಟುಹಬ್ಬ: ಶುಭಾಶಯ ಕೋರಿದ ಪರಿಷತ್ ಶಾಸಕ ಟಿ ಎ ಶರವಣ

    June 20, 2025

    ಕಿಚ್ಚ ಸುದೀಪ್‌ ಹೆಸರಲ್ಲಿ ಪಂಗನಾಮ..ಯುವನಟನಿಗೆ ನಂದಕಿಶೋರ್‌ ದೋಖಾ…?

    June 20, 2025

    ಕೊನೆಗೂ ಬಯಲಾಯ್ತು ವರ್ಷಗಳಿಂದ ನಿಗೂಢವಾಗಿದ್ದ ನಿತ್ಯಾನಂದನ ಕೈಲಾಸ ಸ್ಥಳ..!

    June 20, 2025

    ದಿನದ ಕೆಲಸದ ಅವಧಿಯನ್ನು 10 ತಾಸಿಗೆ ವಿಸ್ತರಿಸಲು ಉದ್ದೇಶಿಸಲಾಗಿದೆ: ಸಚಿವ ಸಂತೋಷ್ ಲಾಡ್

    June 20, 2025

    ನಿಯಮ ಉಲ್ಲಂಘನೆ: ಬೆಂಗಳೂರಿನ 17ಕ್ಕೂ ಹೆಚ್ಚು ಡ್ಯಾನ್ಸ್‌ ಬಾರ್‌ಗಳ ಮೇಲೆ ಖಾಕಿ ದಾಳಿ!

    June 20, 2025

    ಗ್ಯಾಸ್ ಸಿಲಿಂಡರ್ ಕದ್ದೊಯ್ದ ಖದೀಮ: ಹೆಲ್ಮೆಟ್ ಧರಿಸಿ ಕೃತ್ಯ!

    June 20, 2025

    ಓಮ್ನಿ ಕಾರುಗಳೇ ಇವರ ಟಾರ್ಗೆಟ್: ಖಾಕಿ ಬಲೆಗೆ ಬಿದ್ದ ಖದೀಮರ ಗ್ಯಾಂಗ್!

    June 20, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.