ಚಾಮರಾಜನಗರ : ಇಂದು ಮಲೆಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಆದರೆ ಈ ಸಚಿವ ಸಂಪುಟ ಸಭೆಯಲ್ಲಿ ಸ್ಥಳೀಯ ಶಾಸಕರ ಕಡೆಗಣನೆ ಮಾಡಿರುವು ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯ ಕಾಂಗ್ರೆಸ್ ಶಾಸಕರ ಸಭೆ ನಡೆಸದೇ ಕಡೆಗಣನೆ ಮಾಡಲಾಗುತ್ತಿದೆ ಎಂದು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರಬೆಟ್ದದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಕೆ.ವೆಂಕಟೇಶ್ ಕಡೆಗಣನೆ ಸ್ಥಳೀಯ ಶಾಸಕರ ಕಡೆಗಣನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಮಹದೇಶ್ವರ ಬೆಟ್ಟದಲ್ಲಿ ಇಂದು ಕ್ಯಾಬಿನೆಟ್ ಸಭೆ: ಮುಂಜಾನೆಯೇ ದೇಗುಲದಲ್ಲಿ DK ಶಿವಕುಮಾರ್ ಪೂಜೆ!
ಈ ಬಗ್ಗೆ ಮಾತನಾಡಿರುವ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು, ಮೈಸೂರು ಬೆಂಗಳೂರು ಮಂಡ್ಯ ಸಚಿವರು ಸ್ಥಳೀಯ ಶಾಸಕರ ಸಭೆ ನಡೆಸಿ ಜಿಲ್ಲೆಯ ಅಭಿವೃದ್ಧಿಗೆ ಅಭಿಪ್ರಾಯ ಸಂಗ್ರಹಿಸಲಾಗಿದೆ. ನಾಮಕಾವಸ್ಥೆಗೂ ಸಭೆ ನಡೆಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳೀಯ ಕಾಂಗ್ರೆಸ್ ಶಾಸಕರ ಅಭಿಪ್ರಾಯ ಸಲಹೆ ಪಡೆದಿಲ್ಲ. ಚಾಮರಾಜನಗರ ಜಿಲ್ಲಾ ಅಭಿವೃದ್ದಿಗಾಗಿ ಸ್ಥಳೀಯ ಕಾಂಗ್ರೆಸ್ ಶಾಸಕರ ಸಭೆ ಕರೆದು ಆಯಾ ಕ್ಷೇತ್ರಗಳ ಅಭಿವೃದ್ಧಿಗೆ ಸಲಹೆ ಪಡೆಯಬಹುದಿತ್ತು. ಆದರೆ ಜಿಲ್ಲಾ ಉಸ್ತುವಾರಿ ಹೊತ್ತವರು ಆ ಕೆಲಸ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.