ಚಾಮರಾಜನರ : ಮಲೆಮಹದೇಶ್ವರ ಸನ್ನಿಧಿಯಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಈ ಐತಿಹಾಸಿಕ ಸಂಪುಟ ಸಭೆಯಲ್ಲಿ ಸುಮಾರು 3647 ಕೋಟಿ 42 ಲಕ್ಷ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಅಂಗೀಕಾರ ನೀಡಲಾಯಿತು. ಸಭೆಯಲ್ಲಿ ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ ಮೃತರಾದ ಎಲ್ಲ ಹುತಾತ್ಮರಿಗೆ ಶ್ರದ್ಧಾಂಜಲಿ ಮತ್ತು ಧರ್ಮಗುರು ಪೋಪ್ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕಲಬುರಗಿ ವಿಭಾಗದ ಕ್ಯಾಬಿನೆಟ್ ಸಭೆ ಬಳಿಕ ಇಂದು ಮೈಸೂರು ವಿಭಾಗದ ಸಂಪುಟ ಸಭೆ ನಡೆಸಿದ್ದೇವೆ. ಇದೇ ರೀತಿ ಬೆಳಗಾವಿ ವಿಭಾಗದ ಸಂಪುಟ ಸಭೆ ಬಿಜಾಪುರದಲ್ಲಿ, ಬೆಂಗಳೂರು ವಿಭಾಗದ ಸಭೆ ನಂದಿ ಬೆಟ್ಟದಲ್ಲಿ ನಡೆಯಲಿದದೆ ಎಂದರು.
ರಾಜ್ಯದ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಮಾಡಿರೋದು ಕಾಂಗ್ರೆಸ್ ಸರ್ಕಾರ ಮಾತ್ರ: ಡಿಸಿಎಂ ಡಿ.ಕೆ. ಶಿವಕುಮಾರ್
ಪಿಡಬ್ಲ್ಯೂಡಿ, ಬೃಹತ್-ಸಣ್ಣ ನೀರಾವರಿ ಇಲಾಖೆ, ಇಂಧನ ಇಲಾಖೆ, ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ, ಬುಡಕಟ್ಟು ಅಭಿವಧ್ಧಿ, ಟ್ರೈಬಲ್ ಹಳ್ಳಿಗಳಿಗೆ ರಸ್ತೆಗಳಿಗೆ ಅನುದಾನ ನೀಡಲಾಗುವುದು. 1787 ಕೋಟಿ ನೀರಾವರಿಗೆ ಮತ್ತು sc/st ಜನರ ವಸತಿ, ಕೇರಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲಾಗುವುದು. ಮಾನವ-ಪ್ರಾಣಿ ಸಂಘರ್ಷ ತಡೆಯಲು 210 ಕೋಟಿ. ರೈಲ್ವೇ ಬ್ಯಾರಿಕೇಡ್ ಪೂರ್ಣಗೊಳಿಸಲಾಗುವುದು.
ಕುಡಿಯುವ ನೀರಿಗಾಗಿ 315 ಕೋಟಿ, ಆರೋಗ್ಯ ಸುಧಾರಣೆಗೆ 228 ಕೋಟಿ, ಕೊಳ್ಳೇಗಾಲದಲ್ಲಿ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಸಂಪುಟ ಅಂಗೀಕಾರ. 250 ಬೆಡ್ ಗಳ ಜಿಲ್ಲಾಸ್ಪತ್ರೆ ನಿರ್ಮಾಣ ಮತ್ತು ಪ್ರವಾಸೋದ್ಯಮ ಇಲಾಖೆಗೆ 300 ಕೋಟಿ ಅನುದಾನ ನೀಡಲು ನಿರ್ಧರಿಸಲಾಗಿದೆ. ಹನೂರಿನಲ್ಲಿ ಹೊಸ ತಾಲ್ಲೂಕಿಗೆ ತಾಲ್ಲೂಕಾ ಆಸ್ಪತ್ರೆ, ತಾಲ್ಲೂಕಾ ಭವನ ನಿರ್ಮಾಣ, ಚಿಕ್ಕಲ್ಲೂರಿನಲ್ಲಿ ರಾಜಪ್ಪಾಜಿ, ಸಿದ್ದಪ್ಪಾಜಿ, ಮಂಟೇಸ್ವಾಮಿ ಅಭಿವೃದ್ಧಿ ಕೇಂದ್ರ.
ವರನಟ ಡಾ.ರಾಜ್‌ಕುಮಾರ್ ಭಾವಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ
ಮೈಸೂರು ತಾಲ್ಲೂಕಿನ ಇಲವಾಲದಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣ ನಿರ್ಮಿಸಲು ಜಾಗ ಒದಗಿಸಲಾಗಿದೆ. ಅಂದಾಜು 40 ಕೋಟಿ ಬದನವಾಳು ಅಭಿವೃದ್ಧಿ ಮಾಡಲಾಗುವುದು. ಮೈಸೂರಿನ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ 101 ಕೋಟಿ ಮೊತ್ತದ ಜಾಗ ನೀಡಲಾಗುವುದು. ಮೈಸೂರಿನ ಅಟಾರ್ಹಾ ಕಚೇರಿಯ 100 ಕೋಟಿ ವೆಚ್ಚದ ಮ್ಯೂಸಿಯಂ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ. ಗುಂಡ್ಲುಪೇಟೆಯಲ್ಲಿ 475 ಕೋಟಿ ವೆಚ್ಚ 110 ಕೆರೆಗಳಿಗೆ ನೀರು ತುಂಬಿಸುವುದು.
ಚಾಮರಾಜನಗರದಲ್ಲಿ ಹೊಸ ಪ್ರವಾಸಿ ಮಂದಿರ ನಿರ್ಮಾಣ, ಚಾಮರಾಜನಗರ ಟೌನ್ ನಲ್ಲಿ ಕುಡಿಯುವ ನೀರು, ಒಳ ಚರಂಡಿ ನಿರ್ಮಾಣಕ್ಕೆ ನೀಡಲಾಗಿದೆ. ಚಾಮರಾಜನಗರದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ 15 ಕೋಟಿ ನೀಡಲು ನಿರ್ಧರಿಸಲಾಗಿದೆ. ಒಟ್ಟಾಗಿ, 3647.62 ಕೋಟಿ ವೆಚ್ಚದಲ್ಲಿ ಮೈಸೂರು ವಿಭಾಗದಲ್ಲಿ ತುರ್ತು ಅಭಿವೃಧ್ಧಿ ಕಾರ್ಯಗಳು ನಡೆಯಲಿವೆ ಎಂದರು.
.