ಕೋಲಾರ:- ಭೀಕರ ಕಾರು ಅಪಘಾತದಲ್ಲಿ ಕಾರಿನಲ್ಲಿದ್ದ ತಾಯಿ ಸಾವನ್ನಪ್ಪಿದ್ದು, ಮಗ ಗಂಭೀರ ಗಾಯಗೊಂಡ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಆನೇಪುರ ಗ್ರಾಮದ ಬಳಿ ನಡೆದಿದೆ.
ಪುಷ್ಪಲತಾ ಮೃತ ಮಹಿಳೆ. ಘಟನೆಯಲ್ಲಿ ಪುಷ್ಪಲತಾ ಪುತ್ರ ಮಂಜುನಾಥ್ ಗಂಭೀರ ಗಾಯಗೊಂಡಿದ್ದಾರೆ. ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ