ಹಾವೇರಿ:- ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಕುಮಾರಪಟ್ಟಣಂ ಗ್ರಾಮದ ಬೈಪಾಸ್ ಬಳಿ ಜರುಗಿದೆ. ಘಟನೆಯಿಂದ ಓರ್ವ ಗಂಭೀರ ಗಾಯಗೊಂಡಿದ್ದಾರೆ.
ಧಾರಾಕಾರ ಮಳೆಗೆ ನೀರಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಶವ ಪತ್ತೆ: ಮೃತನ ನಿವಾಸಕ್ಕೆ ಸಚಿವ ಸಂತೋಷ್ ಲಾಡ್ ಭೇಟಿ!
36 ವರ್ಷದ ಪ್ರವೀಣ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಇನ್ನೊಬ್ಬರ ಗುರುತು ಪತ್ತೆಯಾಗಿಲ್ಲ. ಅಪಘಾತದಲ್ಲಿ ಕೊಟ್ಟೇಶ ಅಬಲೂರ ಗಾಯಗೊಂಡ ವ್ಯಕ್ತಿ. ಇವರನ್ನು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾರಿಗೆ ಬಸ್ ಅಥಣಿಯಿಂದ ದಾವಣಗೆರೆಗೆ ಹೊರಟಿದ್ದು, ಬೈಪಾಸ್ನಲ್ಲಿ ಮುಖಾಮುಖಿ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ.
ಘಟನೆ ಸಂಬಂಧ ಕುಮಾರಪಟ್ಟಣಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.