ಹಾಸನ:- ಭಾರೀ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿ ಹೊಡೆದಿರುವ ಘಟನೆ ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದ ಬಳಿ ಜರುಗಿದೆ. ಅಭಿಷೇಕ್ (27), ಶರತ್ (28) ಮೃತದುರ್ದೈವಿಗಳು.
ಭಾರೀ ಮಳೆ: ಕರ್ನಾಟಕದ ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ!
KA 03, AK 5325 ಸಂಖ್ಯೆಯ ಎರ್ಟಿಗಾ ಕಾರಿನಲ್ಲಿ ನಾಲ್ವರು ಸ್ನೇಹಿತರು ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ದಾರಿ ಮಧ್ಯೆ ಮಳೆಯಿಂದ ರಸ್ತೆ ಕಾಣದೆ ಚಾಲಕ ರಸ್ತೆ ಬದಿಯ ಕಬ್ಬಿಣದ ಡಿವೈಡರ್‌ಗೆ ಕಾರು ಗುದ್ದಿದ್ದಾರೆ. ಕಾರಿನಲ್ಲಿದ್ದ ಅಭಿಷೇಕ್ ಮತ್ತು ಶರತ್ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು, ಧನಂಜಯ ಮತ್ತು ಸಂದೀಪ್ ಎಂಬುವರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ