ಬೆಂಗಳೂರು:- ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಮತ್ತು ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಇತ್ತೀಚೆಗೆ ಮಹಿಳೆಯೋರ್ವರು ಆರೋಪ ಮಾಡಿ ದೂರು ಕೊಟ್ಟಿದ್ದರು.
ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆ ಸಂತ್ರಸ್ತ ಮಹಿಳೆಯು ಪೊಲಿಸ್ ಕಮೀಷನರ್ ಗೆ ದೂರು ಕೊಟ್ಟಿದ್ದಾರೆ. ಅಷ್ಟೇ ಅಲ್ಲದೇ ಸಂತ್ರಸ್ತೆ ಮಾವನ ಹಕ್ಕುಗಳ ಆಯೋಗಕ್ಕೂ ದೂರು ಕೊಟ್ಟರೂ ಪ್ರಯೋಜನವಾಗಿಲ್ಲ. ಬೇರೆ, ಬೇರೆ ರಾಜ್ಯಗಳಿಂದ ಕರೆ ಮಾಡಿ ಕಂಪ್ಲೆಂಟ್ ವಾಪಸ್ ತೆಗೆದುಕೊಳ್ಳದಿದ್ದರೆ ಪರಿಣಾಮ ನೆಟ್ಟಗಿರೋದಿಲ್ಲ ಎಂದು ಧಮ್ಕಿ ಹಾಕುತ್ತಿದ್ದಾರೆ. ಮಧ್ಯರಾತ್ರಿ ಯಲ್ಲಿ ಕರೆ ಮಾಡಿ ಆವಾಜ್ ಹಾಕ್ತಾರೆ.
ಇಷ್ಟೆಲ್ಲಾ ಆದ್ರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ನನಗೆ ನ್ಯಾಯ ಸಿಗುತ್ತಿಲ್ಲ. ಹೀಗಾಗಿ ನ್ಯಾಯ ಒದಗಿಸುವಂತೆ ಮಹಿಳೆ ಪೊಲೀಸ್ ಕಮಿಷನರ್ ಗೆ ದೂರು ಕೊಟ್ಟಿದ್ದಾರೆ.