ಬೆಂಗಳೂರು:- ಜನಿವಾರ ತೆಗೆಸಿ ಸಿಇಟಿ ಪರೀಕ್ಷೆಗೆ ಅವಕಾಶ ನೀಡಿದ ಎರಡೂ ಪ್ರತ್ಯೇಕ ಪ್ರಕರಣಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವ ಎಚ್ಚರಿಕೆ ನೀಡಿದೆ.
ತನ್ನ ಇಬ್ಬರು ಮಕ್ಕಳನ್ನು ಕೊಂದು ಸೂಸೈಡ್ ಮಾಡಿಕೊಂಡ ಮಹಿಳೆ! ಮಾನಸಿಕ ಖಿನ್ನತೆ ಕಾರಣ?
ಪ್ರಕರಣ ಬೆಳಕಿಗೆ ಬಂದ ತಕ್ಷಣವೇ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಶುಕ್ರವಾರ ಪತ್ರ ಬರೆದು, ಸಮಗ್ರ ವರದಿ ನೀಡುವಂತೆ ಸೂಚಿಸಿದ್ದಾರೆ.
ವಸ್ತ್ರ ಸಂಹಿತೆಯಲ್ಲಿ ಎಲ್ಲಿಯೂ ಜನಿವಾರ ತೆಗೆಸಬೇಕೆಂದು ಹೇಳಿರಲಿಲ್ಲ. ಆದರೂ ಎರಡು ಕೇಂದ್ರಗಳಲ್ಲಿ ಈ ರೀತಿಯ ಅಧಿಕ ಪ್ರಸಂಗ ಮಾಡಿರುವುದು ಖಂಡನೀಯ. ಈ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.