ಬೆಂಗಳೂರು:- ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಹಿಂಬಾಲಿಸಿ ಬಂದ ಯುವಕನೊಬ್ಬ ಬಲವಂತವಾಗಿ ತಬ್ಬಿಕೊಳ್ಳಲು ಯತ್ನಿಸಿ ಎದೆಯ ಭಾಗವನ್ನು ಮುಟ್ಟಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಹುಡುಕೋದೆ ಪೊಲೀಸರಿಗೆ ಸವಾಲಾಗಿದೆ.
ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷನ ಮೇಲೆ ಹಣ ದುರ್ಬಳಕೆ ಆರೋಪ: ಬೆಂಗಳೂರು ಸೇರಿ 8 ಕಡೆ ಇಡಿ ದಾಳಿ!
ಹೌದು, ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವಕನ ಅಸಭ್ಯ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯನ್ನು ಪತ್ತೆಹಚ್ಚುವುದೇ ದೊಡ್ಡ ಸವಾಲಾಗಿದೆ.
ಪೊಲೀಸ್ ತಂಡಗಳು ಎಷ್ಟೇ ಹುಡುಕಾಟ ನಡೆಸಿದರೂ ಸಂತ್ರಸ್ತ ಯುವತಿ ಪತ್ತೆಯಾಗಿಲ್ಲ. ಏಪ್ರಿಲ್ 3 ರ ಮಧ್ಯರಾತ್ರಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಹಿಂದಿನಿಂದ ತಬ್ಬಿದ ಯುವಕ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದ.
ಈ ಸಂಬಂಧ ಪ್ರಕರಣ ದಾಖಲಿಸಿರುವ ಸುದ್ದಗುಂಟೆಪಾಳ್ಯ ಪೊಲೀಸರು ನಾಲ್ಕು ವಿಶೇಷ ತಂಡಗಳನ್ನು ರಚಿಸಿ ಆರೋಪಿ ಮತ್ತು ಸಂತ್ರಸ್ತ ಯುವತಿಯ ಪತ್ತೆಗೆ ಇಳಿದಿದ್ದಾರೆ.
ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನ 1ನೇ ಕ್ರಾಸ್‌ನಲ್ಲಿ ಏಪ್ರಿಲ್ 3ರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಈ ದೃಶ್ಯ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಘಟನೆ ಸಂಬಂಧ ಸ್ಥಳೀಯ ನಿವಾಸಿಯೊಬ್ಬರ ದೂರು ಆಧರಿಸಿ, ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ
ಇಬ್ಬರು ಯುವತಿಯರು ಸುದ್ದಗುಂಟೆ ಪಾಳ್ಯದ ಭಾರತಿ ಲೇಔಟ್‌ನ 1ನೇ ಕ್ರಾಸ್‌ನಲ್ಲಿ ರಾತ್ರಿ 1.52ರ ವೇಳೆ ನಡೆದುಕೊಂಡು ಬಂದಿದ್ದಾರೆ. ಈ ವೇಳೆ ಅವರನ್ನು ಹಿಂಬಾಲಿಸಿಕೊಂಡ ಬಂದ ಯುವಕ, ಏಕಾಏಕಿ ಒಬ್ಬ ಯುವತಿಯನ್ನು ಎಳೆದಾಡಿ, ತಬ್ಬಿಕೊಳ್ಳಲು ಯತ್ನಿಸಿದ್ದ. ಈ ವೇಳೆ ಯುವತಿಯರು ಜೋರಾಗಿ ಕಿರುಚಿಕೊಂಡಾಗ ಆತ ಸ್ಥಳದಿಂದ ಪರಾರಿಯಾಗಿದ್ದ. ಸದ್ಯ ತನಿಖೆ ಚುರುಕು ಮಾಡಿರುವ ಪೊಲೀಸರು ತನಿಖೆ ಚುರುಕು ಮಾಡಿದ್ದಾರೆ.