ಬೆಂಗಳೂರು:- ಬೆಂಗಳೂರಿನಲ್ಲಿ ಮಹಿಳೆ ಕೊಂದು ಕಸದ ಲಾರಿಗೆ ಶವ ಎಸೆದ ಕೇಸ್ ಗೆ ಸಂಬಧಪಟ್ಟಂತೆ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ತಮ್ಸುದ್ದಿನ್ ಬಂಧಿತ ಆರೋಪಿ
ಕೊಲೆಯಾದ ಮಹಿಳೆ ನಿವಾಸಿ ಪುಷ್ಪಾ @ ಆಶಾ ಮತ್ತು ತಮ್ಸುದ್ದೀನ್ ಲಿವ್ ಇನ್ ರಿಲೇಷನ್ನಲ್ಲಿದ್ದರು. ಇಬ್ಬರ ಭಿನ್ನಾಭಿಪ್ರಾಯ ಉಂಟಾಗಿತ್ತು, ಇದೇ ಕೊಲೆಗೆ ಕಾರಣ ಅನ್ನೋದು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಪ್ರಕರಣ ದಾಖಲಾದ 20 ಗಂಟೆ ಒಳಗಾಗಿಯೇ ಹಂತಕನನ್ನು ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ ನೇತೃತ್ವದ ತಂಡ ಬಂಧಿಸಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಹಂತಕನನ್ನ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.