ಬೆಂಗಳೂರು: ಲಿಂಗಾಯತ, ಒಕ್ಕಲಿಗ ಸಮುದಾಯಗಗಳ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಜಾತಿ ಗಣತಿ ವರದಿ ಸ್ವೀಕಾರ ಮಾಡೋ ಬಗ್ಗೆ ಏಪ್ರಿಲ್ 17ರಂದು ವಿಶೇಷ ಸಂಪುಟ ಸಭೆ ನಡೆಸಲು ಸರ್ಕಾರ ತೀರ್ಮಾನಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಜಾತಿ ಗಣತಿ ವರದಿ ಬಗ್ಗೆ ಕೂಲಂಕಶ ಚರ್ಚೆ ನಡೆಸಬೇಕಿದೆ. ಹೀಗಾಗಿ ಏ.17ರಂದು ವಿಶೇಷ ಸಂಪುಟ ಸಭೆ ನಡೆಸಿ ಮುಂದಿನ ನಿರ್ಧಾರಕ್ಕೆ ಬರಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಕ್ಕೆ ಬರಲಾಗಿದೆ.
ಜಾತಿ ಗಣತಿ ವರದಿ ಬಹಳ ಸೂಕ್ಷ್ಮ ವಿಷಯವಾಗಿರುವ ಹಿನ್ನೆಲೆಯಲ್ಲಿ ಆತುರ ತೋರದೆ, ಸುದೀರ್ಘವಾಗಿ ಚರ್ಚೆ ಮಾಡಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಹೀಗಾಗಿ ಮತ್ತೆ ಜಾತಿಗಣತಿ ವರದಿಗೆ ಹಿಡಿದ ಗ್ರಹಣ ಸದ್ಯಕ್ಕೆ ಕಳೆಯೋ ಲಕ್ಷಣಗಳು ಕಾಣುತ್ತಿಲ್ಲ.
ಮತ್ತೆ ಮುಂದಕ್ಕೆ ಹೋಯ್ತು ಜಾತಿಗಣತಿ: ಏ.17ರಂದು ವಿಶೇಷ ಸಂಪುಟ ಸಭೆಗೆ ನಿರ್ಧಾರ
By Author AIN