Close Menu
Ain Live News
    Facebook X (Twitter) Instagram YouTube
    Friday, June 20
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಡಿಸೆಂಬರ್ ವೇಳೆಗೆ ರಾಮನಗರ ಜಿಲ್ಲೆಗೆ ಕಾವೇರಿ ಕುಡಿಯುವ ಶಾಶ್ವತ ನೀರಾವರಿ ಯೋಜನೆ: ಡಿ.ಕೆ.ಶಿವಕುಮಾರ್ ಘೋಷಣೆ

    By Author AINMay 5, 2025
    Share
    Facebook Twitter LinkedIn Pinterest Email
    Demo

    ಮಂಡ್ಯ: ಸಕ್ಕರೆನಾಡು ಮಂಡ್ಯ ಜಿಲ್ಲೆಯ ಜನರ ಬಾಯಾರಿಕೆ ನೀಗಿಸಲು ಪಣ ತೊಟ್ಟಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಸತ್ತೇಗಾಲ ಕುಡಿಯುವ ನೀರಿನ ಯೋಜನೆಯನ್ನು ಪೂರ್ಣಗೊಳಿಸಲು ಭಗೀರಥ ಪ್ರಯತ್ನ ಮಾಡುತ್ತಿದ್ದಾರೆ. ಕಾವೇರಿ‌ ಕುಡಿಯುವ ನೀರಿನ 5 ನೇ ಹಂತ, ಎತ್ತಿನಹೊಳೆ ಸೇರಿದಂತೆ ಹಲವಾರು ಅಸಾಧ್ಯಗಳನ್ನು ಸಾಧ್ಯವಾಗಿಸಿದ ಕೀರ್ತಿ ಇವರದ್ದು.

    ಇದರ ಭಾಗವಾಗಿ ಮೊದಲಿಗೆ ಸತ್ತೇಗಾಲ ಅಣೆಕಟ್ಟಿನ ಬಳಿ ಯೋಜನೆಗೆ ಗುದ್ದಲಿ ಪೂಜೆ  ರ ನೆರವೇರಿಸಿ ಸ್ಥಳ ಪರಿಶೀಲನೆ ಮಾಡಿದರು.

    ಏಕೆ ಕೆಲಸ ವಿಳಂಬವಾಗುತ್ತಿದೆ, ಏನಾದರೂ ಅಡೆತಡೆಗಳಿವೆಯೇ ಎಂದು ಅಧಿಕಾರಿಗಳು, ಯೋಜನೆಯ ಕಾಮಗಾರಿ ನಡೆಸುತ್ತಿರುವ ಹೈದರಾಬಾದಿನ ಮೆಘಾ ಇಂಜಿನಿಯರಿಂಗ್ ಸಂಸ್ಥೆಯ ಎಂಜಿನಿಯರ್ ಗಳ ಬಳಿ ಮಾಹಿತಿ ಪಡೆದುಕೊಂಡ ಡಿ.ಕೆ ಶಿವಕುಮಾರ್‌ ಅಧಿಕಾರಿಗಳ ಬಳಿ ಯೋಜನೆಯ ಪ್ರಗತಿಯ ಬಗ್ಗೆ ವಿವರಗಳನ್ನು ಪಡೆದರು.

    ಇದಾದ ನಂತರ ಇಗ್ಗಲೂರು ಬ್ಯಾರೇಜ್ ವರೆಗೆ ನೀರು ಹರಿಸಲು ಕೊರೆಯುತ್ತಿರುವ ಸುರಂಗ ಹಾಗೂ ಅದರ ಲೈನಿಂಗ್ ಕಾಮಗಾರಿಯನ್ನು ವೀಕ್ಷಣೆ ಮಾಡಿದರು. ಮಾಜಿ ಸಂಸದ  ಡಿ.ಕೆ.ಸುರೇಶ್, ಶಾಸಕರಾದ ಸಿ.ಪಿ.ಯೋಗೆಶ್ವರ್, ಕದಲೂರು ಉದಯ್, ವಿಧಾನಪರಿಷತ್ ಸದಸ್ಯರಾದ ಎಸ್.ರವಿ, ಸುಧಾಮ್‌ ದಾಸ್ ಡಿಕೆಶಿಗೆ ಸಾಥ್‌ ನೀಡಿದರು.

    ರೂ.540 ಕೋಟಿ ವೆಚ್ಚದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ,‌ ಕನಕಪುರ, ಚನ್ನಪಟ್ಟಣ ಹಾಗೂ ಮಾಗಡಿ ತಾಲ್ಲೂಕುಗಳಿಗೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಸಂಕಲ್ಪ ತೊಟ್ಟಿದ್ದು ವರ್ಷದ ಡಿಸೆಂಬರ್ ವೇಳೆಗೆ ಯೋಜನೆ ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು.

    ರಾಮನಗರ ಜಿಲ್ಲೆಗೆ ಕುಡಿಯುವ ನೀರನ್ನು ಒದಗಿಸುತ್ತೇವೆ ಎಂದು ಚನ್ನಪಟ್ಟಣ ಉಪಚುನಾವಣೆ ವೇಳೆ ಮಾತುಕೊಟ್ಟಿದ್ದೆವು. ಈ ಮಾತಿಗೆ ನಾವು ಬದ್ಧರಾಗಿದ್ದೇವೆ. ಈ ಹಿಂದೆ ನಾನು ನೀರಾವರಿ ಸಚಿವನಾಗಿದ್ದಾಗ ಈ ಯೋಜನೆಗೆ ಚಾಲನೆ ನೀಡಲಾಯಿತು. ಆದರೂ ಏಕೆ ವಿಳಂಬವಾಗುತ್ತಿದೆ ಎಂದು ಪರಿಶೀಲನೆ ನಡೆಸಲು ಬಂದಿದ್ದೇನೆ. ಅತ್ಯಂತ ಕಡಿಮೆ ಮೊತ್ತದಲ್ಲಿ 3.30 ಟಿಎಂಸಿ ನೀರನ್ನು ಹರಿಸಲಾಗುತ್ತಿದೆ” ಎಂದರು.

    ರೈತರ ಭೂಮಿ ಸ್ವಾಧೀನ ಪಡಿಸಿಕೊಳ್ಳಲಾಗುವುದೇ ಎಂದು ಕೇಳಿದಾಗ, “ಅಗತ್ಯಕ್ಕೆ ತಕ್ಕಂತೆ ರೈತರ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ. ಯೋಜನೆಗೆ ಭೂಮಿ ನೀಡಿ ಸಹಕಾರ ನೀಡಿದ ರೈತರಿಗೆ ಉತ್ತಮ ಪರಿಹಾರ ನೀಡಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಂತರ್ಜಲ ಹೆಚ್ಚಳ ಸೇರಿದಂತೆ ಜಿಲ್ಲೆಯ ಜನರ ಕುಡಿಯುವ ನೀರಿನ ಬವಣೆ ತಪ್ಪಲಿದೆ” ಎಂದು ಹೇಳಿದರು.

    ಯೋಜನೆಯ ವಿವರ

    ಮಳೆಯ ಅಭಾವದ ಕಾರಣಕ್ಕೆ ಹಲವಾರು ವರ್ಷಗಳಿಂದ ತತ್ತರಿಸಿ ಹೋಗಿರುವ ಬೆಂಗಳೂರು ದಕ್ಷಿಣ ಜಿಲ್ಲೆಯ ಸುಮಾರು 10.82 ಲಕ್ಷ ಜನರಿಗೆ ಹಾಗೂ 9.03 ಲಕ್ಷ ಜಾನುವಾರುಗಳಿಗೆ ಈ ಕುಡಿಯುವ ನೀರಿನ ಯೋಜನೆಯಿಂದ ಲಾಭವಾಗಲಿದೆ.

    “ರೂ.540 ಕೋಟಿ ವೆಚ್ಚದಲ್ಲಿ ಈ ಕುಡಿಯುವ ನೀರಿನ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ‌. ಮಳವಳ್ಳಿಯ ಬೆಳಕವಾಡಿ ಸಮೀಪ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಸತ್ತೇಗಾಲ ಅಣೆಕಟ್ಟಿನಿಂದ 220 ಕ್ಯೂಸೆಕ್ಸ್ ನೀರನ್ನು 180 ದಿನಗಳ ಕಾಲ ಇಗ್ಗಲೂರು ಬ್ಯಾರೇಜಿಗೆ ಹರಿಸಲಾಗುತ್ತದೆ.

    ಸತ್ತೇಗಾಲ ಅಣೆಕಟ್ಟಿನಿಂದ ಇಗ್ಗಲೂರು ಬ್ಯಾರೇಜ್ ತನಕ  ಸುಮಾರು ಸುಮಾರು 26 ಕಿ.ಮೀ ಉದ್ದ ಗುರುತ್ವಾಕರ್ಷಣೆಯ ಮೂಲಕ ನೀರನ್ನು ಹರಿಸುತ್ತಿರುವುದು ಈ ಯೋಜನೆಯ ವಿಶೇಷ. 12.5 ಕಿ.ಮೀ ಉದ್ದದ ವರೆಗೆ ಸುರಂಗ ಮಾರ್ಗ ನಂತರ 13.35 ಕಿ.ಮೀ ಉದ್ದ ಪೈಪ್ ಲೈನ್ ಇರಲಿದೆ. ಪ್ರಸ್ತುತ ಸುರಂಗ ಮಾರ್ಗವು 4 ಮೀ ಸುತ್ತಳತೆ ಹೊಂದಿದ್ದು ‘ಡಿ’ ಆಕಾರದಲ್ಲಿ ಇರಲಿದೆ.

    ನಂತರ ಏತ ನೀರಾವರಿ ಮೂಲಕ ಇಗ್ಗಲೂರು ಬ್ಯಾರೇಜ್ ನಿಂದ ಮೊಹೇನಹಳ್ಳಿ ಕೆರೆಗೆ, ಈ ಕೆರೆಯಿಂದ ಕಣ್ವ ಜಲಾಶಯ‌ ನಂತರ ಮಂಚನಬೆಲೆ ಹಾಗೂ ವೈ.ಜಿ.ಗುಡ್ಡ ಜಲಾಶಯಕ್ಕೆ ನೀರು ತುಂಬಿಸಲಾಗುವುದು. ಪ್ರಸ್ತುತ ಸುಮಾರು 11.33 ಕಿ.ಮೀ ವರೆಗೆ ಸುರಂಗ ಕೊರೆಯುವ ಕಾಮಗಾರಿ ಪೂರ್ಣಗೊಂಡಿದ್ದು ಪ್ರಸ್ತುತ ಲೈನಿಂಗ್ ಕಾಮಗಾರಿ ನಡೆಯುತ್ತಿದೆ. 670 ಮೀ ನಷ್ಟು ಸುರಂಗ ಕೊರೆಯಿವ ಕಾಮಗಾರಿ ಬಾಕಿಯಿದೆ. ಸುರಂಗ ಮಾರ್ಗದ 4.15 ಮೀ ನಷ್ಟು ಸಿ.ಸಿ ಲೈನಿಂಗ್ ಕಾಮಗಾರಿ ಪೂರ್ಣಗೊಂಡಿದೆ. ಯೋಜನೆಯಲ್ಲಿ 13.35 ಕಿ.ಮೀ ಉದ್ದದ ಪೈಪ್ ಲೈನ್ ಇದ್ದು. ಇದರಲ್ಲಿ 5.5 ಕಿ.ಮೀ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ ಎಂದು ಡಿ.ಕೆ ಶಿವಕುಮಾರ್‌ ವಿವರ ನೀಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಹುಲಿ ದಾಳಿ: ಕುರಿಗಳನ್ನು ಮೇಯಿಸುತ್ತಿದ್ದ ಮಹಿಳೆ Spot Death!

    June 20, 2025

    ನಿಮ್ಮ ಮನೆಯಲ್ಲಿ ಮನಿ ಪ್ಲಾಂಟ್ ಇದೆಯೇ..? ಹಾಗಿದ್ರೆ ಅಪ್ಪಿತಪ್ಪಿಯೂ ಈ ತಪ್ಪುಗಳನ್ನ ಮಾಡಬೇಡಿ.!

    June 20, 2025

    `UPI’ ಬಳಕೆದಾರರೇ ಎಚ್ಚರ.. ಈ ಆಪ್ಷನ್ ತಕ್ಷಣ ನಿಷ್ಕ್ರಿಯಗೊಳಿಸಿ, ಇಲ್ಲ ಅಂದ್ರೆ ನಿಮ್ಮ ಬ್ಯಾಂಕ್ ಖಾತೆ ಖಾಲಿ!

    June 20, 2025

    ಬೆಂಗಳೂರಿಗೆ ಭೇಟಿ ಕೊಟ್ಟ ಕೇಂದ್ರ ಸಚಿವ ಅಮಿತ್ ಶಾ: ಹೂಗುಚ್ಛ ನೀಡಿ ಸ್ವಾಗತಿಸಿದ ಬಿವೈ ವಿಜಯೇಂದ್ರ!

    June 19, 2025

    ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ: ಇದು ಸಂವಿಧಾನಕ್ಕೆ ಮಾಡಿದ ಅಪಚಾರ – ಆರ್‌.ಅಶೋಕ್ ವಾಗ್ದಾಳಿ!

    June 19, 2025

    ಹೊಸಪೇಟೆ: ಅಟಲ್‌ಜೀ ಮೃಗಾಲಯದಲ್ಲಿ ಹೆಣ್ಣು ಹುಲಿ ‘ದೇವಿ’ ಸಾವು!

    June 19, 2025

    ಮಹಾರಾಷ್ಟ್ರದಲ್ಲಿ ಧಾರಕಾರ ಮಳೆ: ತುಂಬಿ ಹರಿಯುತ್ತಿದ್ದಾಳೆ ಕೃಷ್ಣೆ!

    June 19, 2025

    ಕಬ್ಬಿನ ಬಾಕಿ ಬಿಲ್ ಪಾವತಿಗೆ ಆಗ್ರಹ: ಜಿಲ್ಲಾಡಳಿತ ಭವನದ ಮುಂದೆ ರೈತರ ಪ್ರತಿಭಟನೆ!

    June 19, 2025

    Breaking News: ಬೆಂಗಳೂರಿನ Pixies Spa ಮೇಲೆ CCB ದಾಳಿ: ವೇಶ್ಯವಾಟಿಕೆ ಶಂಕೆ, ಬಾಂಗ್ಲಾದೇಶದ ಯುವತಿ ಪತ್ತೆ!

    June 19, 2025

    ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್: ಅಲ್ಲಿನ ಪರಿಸ್ಥಿತಿ ಬಗ್ಗೆ ಹೇಳಿದ್ದೇನು?

    June 19, 2025

    ರಸ್ತೆ ಬದಿಯ ಮರಗಳ ಸುತ್ತ ಹಾಕಲಾದ ಕಾಂಕ್ರೀಟ್, ಕಲ್ಲು ಮತ್ತು ಸಿಮೆಂಟ್ ಬ್ಲಾಕ್ ತೆರವಿಗೆ ಆದೇಶ: ಪ್ರೀತಿ ಗೆಹ್ಲೋಟ್!

    June 19, 2025

    ರಾಹುಲ್ ಗಾಂಧಿ ಜನ್ಮದಿನ: ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ನೇತ್ರದಾನ!

    June 19, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.