ಬೆಳಗಾವಿ: ಭಾರತ- ಪಾಕ್ ನಡುವೆ ಕದಮ ವಿರಾಮ ಹಿನ್ನೆಲೆ ಪೆಹಲ್ಗಾಮ್ ನಲ್ಲಿ ಮೃತಪಟ್ಟ ಪ್ರವಾಸಿಗರಿಗೆ ನ್ಯಾಯ ಸಿಕ್ಕಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಪೂರ್ಣ ಪ್ರಮಾಣದ ಯುದ್ಧ ಆಗುತ್ತದೆ ಎಂದು ಎಲ್ಲರೂ ನಿರೀಕ್ಷೆ ಮಾಡಿದ್ದರು. ಆದರೆ ಆಗಿಲ್ಲ. ದೇಶವನ್ನು ಯಾವ ರೀತಿ ಕಟ್ಟಬೇಕು ಎನ್ನುವುದು ಮುಂದಿರುವ ಸವಾಲು.
ವಿಜ್ಞಾನಿಗಳನ್ನೇ ಅಚ್ಚರಿಗೊಳಿಸಿದೆ ಈ ಹಣ್ಣು..! ಎಷ್ಟೇ ಗಂಭೀರ ಕಾಯಿಲೆಯಾಗಿದ್ರೂ ಅದರಿಂದ ಸಿಗಲಿದೆ ಮುಕ್ತಿ
1971ರಲ್ಲಿ ಇಂದಿರಾ ಗಾಂಧಿ ಮಾದರಿಯಲ್ಲಿ ಪಾಕ್ ಕಟ್ಟಿ ಹಾಕಿದ್ದರ ಬಗ್ಗೆ ಬಿಜೆಪಿಯವರೇ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಬಿಜೆಪಿಯವರು ಸೇರಿ ಎಲ್ಲರೂ ಯುದ್ಧ ನಿಲ್ಲಿಸಬಾರದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ, ಈಗ ಯುದ್ಧ ನಿಂತಿದೆ. ಹಾಗಾಗಿ, ಏನೂ ಮಾಡಲು ಆಗುವುದಿಲ್ಲ ಎಂದರು.
ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮಧ್ಯಸ್ಥಿಕೆ ವಹಿಸಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿರುವ ವಿಚಾರದ ಬಗ್ಗೆ ಮಾತನಾಡಿ, “ಅದು ಅಂತಾರಾಷ್ಟ್ರೀಯ ವಿಚಾರ. ಟ್ರಂಪ್ ಯಾಕೆ ಮಧ್ಯಸ್ಥಿಕೆ ವಹಿಸಿದರು ಮತ್ತು ಅವರಿಗೆ ಯಾರು ಮನವಿ ಮಾಡಿಕೊಂಡರು ಎಂಬ ವಿಚಾರ ಒಂದು ದಿನ ಹೊರಗೆ ಬರುತ್ತದೆ. ಅಲ್ಲಿಯವರೆಗೆ ನಾವೆಲ್ಲಾ ಕಾಯಬೇಕು” ಎಂದು ತಿಳಿಸಿದರು.