ಗ್ವಾಲಿಯರ್ನ ಶ್ರೀಮಂತ್ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮಧ್ಯಪ್ರದೇಶ ಟಿ20 ಲೀಗ್ನಲ್ಲಿ ಶರವೇಗದ ಸೆಂಚುರಿ ಸಿಡಿಸಿ ಅಭಿಷೇಕ್ ಪಾಠಕ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಪಹಲ್ಗಾಮ್ ದಾಳಿ ಕೇಸ್: ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್!
ಬುಂದೇಲ್‌ಖಂಡ್ ಬುಲ್ಸ್ ಮತ್ತು ಜಬಲ್ಪುರ್ ರಾಯಲ್ ಲಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಬುಂದೇಲ್‌ಖಂಡ್ ಬುಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಪಾಠಕ್ ಸ್ಪೋಟಕ ಇನಿಂಗ್ಸ್ ಆಡಿದರು. ಮೊದಲ ಓವರ್ನಿಂದಲೇ ಹೊಡಿಬಡಿ ಬ್ಯಾಟಿಂಗ್ಗೆ ಒತ್ತು ನೀಡಿದ್ದ ಅಭಿಷೇಕ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್-ಫೋರ್ಗಳ ಸುರಿಮಳೆಗೈದರು. ಈ ಸಿಡಿಲಬ್ಬರದ ಬ್ಯಾಟಿಂಗ್ ಪರಿಣಾಮ ಕೇವಲ 33 ಎಸೆತಗಳಲ್ಲಿ ಅಭಿಷೇಕ್ ಪಾಠಕ್ ಬ್ಯಾಟ್ನಿಂದ ಶತಕ ಮೂಡಿಬಂತು. ಇದು ಮಧ್ಯಪ್ರದೇಶ ಟಿ20 ಲೀಗ್ನಲ್ಲಿ ಮೂಡಿಬಂದ ಅತೀ ವೇಗದ ಶತಕ ಎಂಬುದು ವಿಶೇಷ. ಹಾಗೆಯೇ ಭಾರತೀಯ ಬ್ಯಾಟರ್ ಕಡೆಯಿಂದ ಮೂಡಿಬಂದ 4ನೇ ವೇಗದ ಟಿ20 ಸೆಂಚುರಿಯಾಗಿದೆ
ಟಿ20 ಕ್ರಿಕೆಟ್‌ನಲ್ಲಿ ಅತೀ ವೇಗದ ಶತಕ ಸಿಡಿಸಿದ ಭಾರತೀಯ ಬ್ಯಾಟರ್ನ ದಾಖಲೆ ಅಭಿಷೇಕ್ ಶರ್ಮಾ ಹಾಗೂ ಉರ್ವಿಲ್ ಪಟೇಲ್ ಹೆಸರಿನಲ್ಲಿದೆ. ತ್ರಿಪುರಾ ವಿರುದ್ಧದ ಪಂದ್ಯದಲ್ಲಿ ಗುಜರಾತ್ ಪರ ಕಣಕ್ಕಿಳಿದಿದ್ದ ಉರ್ವಿಲ್ ಪಟೇಲ್ ಕೇವಲ 28 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದರು. ಆ ಬಳಿಕ ಈ ದಾಖಲೆಯನ್ನು ಅಭಿಷೇಕ್ ಶರ್ಮಾ ಸರಿಗಟ್ಟಿದ್ದರು.