ಹಿಂದೂ ಫೈರ್ ಬ್ರ್ಯಾಂಡ್ ಎಂದು ಖ್ಯಾತಿ ಪಡೆದು ಬಿಗ್ ಬಾಸ್ ಮನೆಗೆ ಹೋಗಿ ಬಂದಿದ್ದ ಚೈತ್ರಾ ಕುಂದಾಪುರ ಇತ್ತೀಚೆಗೆಷ್ಟೇ ಹೊಸ ಬಾಳಿಗೆ ಹೆಜ್ಜೆ ಇಟ್ಟಿದ್ದರು. ಇಷ್ಟಪಟ್ಟ ಹುಡ್ಗನ ಜೊತೆ ತಮ್ಮ ಹುಟ್ಟೂರಿನಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದರು. ಶ್ರೀಕಾಂತ್ ಕಶ್ಯಪ್ ಜೊತೆ ಚೈತ್ರಾ ಹೊಸ ಜೀವನ ಆರಂಭಿಸಿದ್ದಾರೆ. ಇದೀಗ ಚೈತ್ರಾ ಬಗ್ಗೆ ತಂದೆ ಬಾಲಕೃಷ್ಣ ನಾಯ್ಕ್ ಸ್ಫೋಟಕ ಆರೋಪ ಮಾಡಿದ್ದಾರೆ.
ಚೈತ್ರಾ ಕುಂದಾಪುರ ಮದುವೆ ತಂದೆ ಬಂದಿರಲಿಲ್ಲ. ಈಗ ಅವರ ತಂದೆ ಮಾಧ್ಯಮಗಳ ಮುಂದೆ ಬಂದು ಮಗಳ ಬಗ್ಗೆ ಸಾಕಷ್ಟು ಆರೋಪ ಮಾಡಿದ್ದಾರೆ. ಈ ಬಗ್ಗೆ ಮಾತಾಡಿರುವ ಬಾಲಕೃಷ್ಣ ನಾಯ್ಕ್, ಆಕೆ ನನ್ನನ್ನು ಮದುವೆಗೆ ಕರೆದಿಲ್ಲ. ನಾನು ಮದುವೆಗೆ ಹೋಗಿಲ್ಲ. ಈ ಮದುವೆಯನ್ನು ನಾನು ಒಪ್ಪಲಾರೆ. ಚೈತ್ರಾ ಮತ್ತು ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಚೈತ್ರಾ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡುತ್ತಿದ್ದಾರೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಇವರು ಹಣ ಹಂಚಿಕೊಂಡಿದ್ದಾರೆ. ನನಗೆ ನನ್ನ ದೊಡ್ಡ ಮಗಳು ಮಾತ್ರ ಆಸರೆ. ನನ್ನ ದೊಡ್ಡ ಮಗಳು ಗಾಯತ್ರಿ ನಿರಪರಾಧಿ. ನಾನು ಮತ್ತು ನನ್ನ ದೊಡ್ಡ ಮಗಳು ಮರ್ಯಾದೆಯಿಂದ ಬದುಕುತ್ತಿದ್ದೇವೆ ಎಂದು ಹೇಳಿದ್ದಾರೆ.
ಬಿಗ್‌ಬಾಸ್‌ಗೆ ಹೋಗುವ ಬಗ್ಗೆ ಹೇಳಿಲ್ಲ
ಚೈತ್ರಾ ಕುಂದಾಪುರ ಬಿಗ್ ಬಾಸ್ ಮನೆಗೆ ಹೋಗುವ ಬಗ್ಗೆಯೂ ತಂದೆ ಬಳಿ ಹೇಳಿರಲಿಲ್ಲವಂತೆ. ಈ ಬಗ್ಗೆ ಮಾತನಾಡಿರುವ ಅವರ ತಂದೆ, ಚೈತ್ರಾ ಬಿಗ್ಬಾಸ್ ಮನೆಗೆ ಹೋಗುವಾಗಲೂ ನನಗೆ ಹೇಳಿಲ್ಲ. ನನ್ನ ಪತ್ನಿ ನನ್ನನ್ನು ಜಗಲಿಯಲ್ಲಿ ಬಿಟ್ಟು ಬೇಗ ಹಾಕಿ ಬಿಗ್‌ಬಾಸ್‌ಗೆ ಹೋಗಿದ್ದಳು. ನಾನು ಕಟ್ಟಿದ ಮನೆಯಲ್ಲಿ ಈಗ ನಾನೇ ಅನಾಥವಾಗಿದ್ದೇನೆ. ನನ್ನ ಮಗಳು ಎಂದು ಹೇಳಲು ನಾಚಿಕೆಯಾಗುತ್ತದೆ. ಆಕೆ ನನ್ನ ಜೀವನದಲ್ಲಿ ಬರಲೇಬಾರದು ಜನ ಆಕೆಗೆ ಮನ್ನಣೆ ಕೊಡಬಾರದು. ತಂದೆ ಇಲ್ಲದ ಮಗಳು ಎಂದು ಹೇಳಿಕೊಂಡು ಬರುತ್ತಾಳೆ. ನನ್ನ ತಂದೆ ಬಾಲ ನಾಯ್ಕ್ ಗೌರವಾನ್ವಿತ ವ್ಯಕ್ತಿಯಾಗಿದ್ದರು ಅಂತ ಹೇಳಿದ್ದಾರೆ.