ಬೆಂಗಳೂರು: ಹಿಂದುಳಿದವರು, ದಲಿತರು, ಅಶಿಕ್ಷಿತರು ಇರುವ ಕಡೆ ಬಾಲ್ಯವಿವಾಹ ಮತ್ತು ಬಾಲಗರ್ಭಿಣಿ ಪ್ರಕರಣಗಳು ಇರುತ್ತವೆ. ಇದನ್ನು ಸಮರ್ಪಕವಾಗಿ ತಡೆಯಬೇಕು ಎಂದು ನಿಮಗೆ ಅನ್ನಿಸಲ್ವಾ ಎಂದು ಸಿಎಂ ಅಧಿಕಾರಿಗಳಿಗೆ ಪ್ರಶ್ನಿಸಿದರು.
ಕಿತ್ತಳೆ ಹಣ್ಣಿನ ಸಿಪ್ಪೆ ಎಸೆಯದಿರಿ: ಕಹಿಯಾದ್ರೂ ಇದರ ರಸದಲ್ಲಿ ಅಡಗಿದೆ ಆರೋಗ್ಯ ಸಿಹಿ!
ಸರಿಯಾಗಿ ನಿಗಾ ವಹಿಸಿ, ವರದಿ ನೀಡದ PDO ಗಳು ರೆವಿನ್ಯೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸಿಎಂ ಸೂಚಿಸಿದರು. ಅಗತ್ಯ ಇರುವ ಕಡೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸು ಹಾಕಿ ಕಾನೂನು ಕ್ರಮ ಕೈಗೊಳ್ಳಿ ಎಂದು ಸಿಎಂ ಸೂಚಿಸಿದರು.
SSLC ಯಲ್ಲಿ ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ DDPI ಗಳಿಗೆ ನೋಟಿಸ್ ನೀಡಬೇಕು, ನೋಟಿಸ್ ಗೆ ಕೊಟ್ಟ ಉತ್ತರ ಸಮರ್ಪಕ ಅನ್ನಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವತಿಗೆ ಸೂಚನೆ ನೀಡಿದರು.