ಬೆಂಗಳೂರು/ನವದೆಹಲಿ:– ಚಿನ್ನಸ್ವಾಮಿ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.
ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ ಘೋಷಣೆ- ಸಿಎಂ ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಠಿ!
ಈ ಸಂಬಂಧ X ಮಾಡಿರುವ ಪ್ರಧಾನಿ ಮೋದಿ, ಬೆಂಗಳೂರಿನಲ್ಲಿ ನಡೆದ ಅಪಘಾತ ನಿಜಕ್ಕೂ ಹೃದಯವಿದ್ರಾವಕ. ಈ ದುರಂತದ ಸಮಯದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಅನುಕಂಪವಿದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇನ್ನೂ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯಿಂದಾಗಿ ಕಾಲ್ತುಳಿತದ ನಂತರ ಅನೇಕರು ಜೀವಕ್ಕಾಗಿ ಹೋರಾಡುತ್ತಿದ್ದಾರೆ. ಜನಸಂದಣಿ ನಿಯಂತ್ರಣ ಕ್ರಮಗಳನ್ನು ತೆಗೆದುಕೊಂಡಿಲ್ಲ, ಯಾವುದೇ ಮೂಲಭೂತ ವ್ಯವಸ್ಥೆಗಳಿಲ್ಲ. ಕೇವಲ ಅವ್ಯವಸ್ಥೆಯೇ ಎದ್ದು ಕಾಣುತ್ತಿತ್ತು. ಅಮಾಯಕರು ಸಾಯುತ್ತಿದ್ದರೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ರೀಲ್ಗಳನ್ನು ಚಿತ್ರೀಕರಿಸುವಲ್ಲಿ ಮತ್ತು ಕ್ರಿಕೆಟಿಗರೊಂದಿಗೆ ಪ್ರಚಾರದಲ್ಲಿ ನಿರತರಾಗಿದ್ದರು. ಇದು ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಗೇಡು ಎಂದು ಬಿಜೆಪಿ ಟೀಕಿಸಿದೆ,