ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಕಾಲ್ತುಳಿತ ಪ್ರಕರಣ: ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ಕೊಡಲಿ- ಶಾಸಕ ಮಹೇಶ ಟೆಂಗಿನಕಾಯಿ!
ಘಟನೆ ಬೆನ್ನಲ್ಲೇ ತುರ್ತು ಸುದ್ದಿಗೋಷ್ಠಿ ನಡೆಸಿರುವ ಸಿದ್ದರಾಮಯ್ಯ, ಚಿನ್ನಸ್ವಾಮಿ ಸ್ಟೇಡಿಯಂ ದುರಂತದಲ್ಲಿ 11 ಜನ ಮೃತಪಟ್ಟಿದ್ದಾರೆ. 47 ಜನ ಗಾಯಾಗಳಿಗೆ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದಿದ್ದಾರೆ.
RCB ವಿಜಯೋತ್ಸವ ಸಂಭ್ರಮದ ವೇಳೆ ಇಂತಹ ದುರಂತ ನಡೆಯಬಾರದಿತ್ತು. ಸರ್ಕಾರ ಬಹಳ ದುಃಖ ವ್ಯಕ್ತಪಡಿಸುತ್ತೆ. ನಾನು ವೈದೇಹಿ, ಬೌರಿಂಗ್ ಆಸ್ಪತ್ರೆಗೆ ಭೇಟಿ ಕೊಟ್ಟು ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದೇನೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 35,000 ವೀಕ್ಷಕರಿಗೆ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಇದೆ. ಆದರೆ ನಮ್ಮ ನಿರೀಕ್ಷೆಗೂ ಮೀರಿ ಜನ ಸೇರಿದ್ದರು. ವಿಧಾನಸೌಧದ ಮುಂದೆ ಒಂದು ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು. ವಿಧಾನಸೌಧದ ಮುಂದೆ ನಡೆದ ಕಾರ್ಯಕ್ರಮದ ವೇಳೆ ಯಾವುದೇ ದುರಂತ ಆಗಿಲ್ಲ. ಆದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ದುರಂತ ಆಗಿದೆ ಎಂದು ಸಿಎಂ ಹೇಳಿದ್ದಾರೆ.
ಯಾರೂ ಕೂಡ ಇದನ್ನ ನಿರೀಕ್ಷೆ ಮಾಡಿರಲಿಲ್ಲ. ಇದೊಂದು ಅನಿರೀಕ್ಷಿತ ಬೆಳವಣಿಗೆ. 11 ಜನ ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡುತ್ತೇವೆ. ಗಾಯಾಳುಗಳಿಗೆ ಚಿಕಿತ್ಸಾ ವೆಚ್ಚವನ್ನೇ ಸರ್ಕಾರವೇ ಭರಿಸಲಿದೆ. ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ನೀಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.