ಬೆಂಗಳೂರು:- ಚಿನ್ನಸ್ವಾಮಿ ದುರಂತ ಪ್ರಕರಣದಲ್ಲಿ ಸರ್ಕಾರದ ತನಿಖೆ ಮೇಲೆ ಯಾರಿಗೂ ನಂಬಿಕೆ ಇಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ: ಬಿಲ್ಡಿಂಗ್ ಗೆ ಹೊತ್ತಿದ ಬೆಂಕಿ.. ಬಾಲಕನ ಸ್ಥಿತಿ ಗಂಭೀರ!
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದಲ್ಲಿ ಹೈಕೋರ್ಟ್ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ ಎಂದರೆ, ಸರ್ಕಾರದ ಮೇಲೆ ಯಾರಿಗೂ ನಂಬಿಕೆ ಇಲ್ಲ.
ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರ ತಪ್ಪು ಮಾಡಿಲ್ಲದಿದ್ದರೆ ಸರಿಯಾಗಿ ತನಿಖೆ ನಡೆಸಬೇಕಿತ್ತು. ಈಗ ಹೈಕೋರ್ಟ್ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ. ಇದಕ್ಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದರೆ, ಕೋರ್ಟ್ ಸರ್ಕಾರವನ್ನು ನಂಬುತ್ತಿಲ್ಲ ಎಂದರ್ಥ. ಸತ್ತಿರುವ 11 ಜನರ ಕುಟುಂಬದವರನ್ನೇ ಕೇಳಿ ತನಿಖೆಗೆ ನೀಡಬಹುದಿತ್ತು. ಮೊದಲು ಜಿಲ್ಲಾಧಿಕಾರಿ, ಆ ನಂತರ ನಿವೃತ್ತ ನ್ಯಾಯಾಧೀಶರು, ಆ ಬಳಿಕ ಎಸ್ಐಟಿ ತನಿಖೆ ಎಂದು ಹೇಳಿದ್ದಾರೆ. ಯಾವುದರಲ್ಲೂ ಖಚಿತತೆ ಇಲ್ಲ ಎಂದು ಕಿಡಿಕಾರಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದವರು ಕ್ರಿಕೆಟಿಗರ ಜೊತೆಗೆ ಫೋಟೋಶೂಟ್ ಮಾಡಿಕೊಂಡಿದ್ದರಿಂದಲೇ 11 ಜನರು ಮೃತರಾಗಿದ್ದಾರೆ. ಬಿಜೆಪಿ ಎಲ್ಲಾ ಬಗೆಯ ಹೋರಾಟಗಳನ್ನು ಮಾಡಿದೆ. ಇನ್ನು ಮುಂದೆಯೂ ಹೋರಾಟ ಮಾಡಲಾಗುವುದು. ಸರ್ಕಾರವೇ ಜನರನ್ನು ವಿಧಾನಸೌಧಕ್ಕೆ ಆಹ್ವಾನಿಸಿದೆ. ಹಾಗೆ ಆಹ್ವಾನ ನೀಡದೇ ಹೋಗಿದ್ದರೆ ಈ ದುರಂತ ನಡೆಯುತ್ತಿರಲಿಲ್ಲ. ನಾವು ಪ್ರತಿಭಟನೆ ಮಾಡಿದಾಗ ನೂರಾರು ಪೊಲೀಸರು ಬಂದಿದ್ದರು. ಅದೇ ರೀತಿ 2 ಲಕ್ಷ ಜನರನ್ನು ನಿಯಂತ್ರಣ ಮಾಡಲು ಹೆಚ್ಚು ಪೊಲೀಸರನ್ನು ನಿಯೋಜಿಸಬೇಕಿತ್ತು ಎಂದು ಹೇಳಿದ್ದಾರೆ.