ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಸಂಬಂಧ X ಮಾಡಿರುವ ಅವರು,ಸಂಭ್ರಮಾಚರಣೆಯು ಯಾವ ರೀತಿ ದುಃಖಕರ ಸಂಗತಿಯಾಗಿ ಬದಲಾಯಿತು. ನಿಜಕ್ಕೂ ಇದು ಹೃದಯವಿದ್ರಾಕ ಘಟನೆ ಎಂದು ಬರೆದುಕೊಂಡು ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಆರ್ಸಿಬಿ ಗೆಲುವು ವಿಜಯೋತ್ಸವದ ವೇಳೆ ಯಡವಟ್ಟು ಸಂಭವಿಸಿ, ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತಕ್ಕೆ 10 ಮಂದಿ ಆರ್ಸಿಬಿ ಫ್ಯಾನ್ಸ್ ದುರ್ಮರಣಕ್ಕೀಡಾಗಿದ್ದಾರೆ. 50ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ
ಬೌರಿಂಗ್ ಆಸ್ಪತ್ರೆಯಲ್ಲಿ 5, ವೈದೇಹಿ ಆಸ್ಪತ್ರೆಯಲ್ಲಿ 4 ಹಾಗೂ ಮಣಿಪಾಲ್ ಆಸ್ಪತ್ರೆಯಲ್ಲಿ ಒಬ್ಬರು ಅಭಿಮಾನಿಗಳು ಮೃತಪಟ್ಟಿದ್ದಾರೆಂದು ವೈದ್ಯರು ದೃಢಪಡಿಸಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.