ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅಮಾನತು ರದ್ದು ಮಾಡಿ ಸಿಎಟಿಯಿಂದ ಮಹತ್ವದ ಆದೇಶ ಹೊರಡಿಸಲಾಗಿದೆ. ವಿಕಾಸ್ ಅವರನ್ನು ಸೇವೆಯಲ್ಲಿ ಮುಂದುವರೆಸಲು ಸಿಎಟಿ ಆದೇಶ ನೀಡಿದೆ. ಹೌದು ಆರ್ಸಿಬಿ ಐಪಿಎಲ್ ಗೆಲುವನ್ನು ಸಂಭ್ರಮಿಸಲು ಜೂನ್ 3 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಗ್ರಾಹಕರಿಗೆ ಎಚ್ಚರಿಕೆ.. ನೀವು ಈ ವಿಷಯಗಳನ್ನು ತಿಳಿದುಕೊಳ್ಳಲೇಬೇಕು..! ಇಂದಿನಿಂದ ಹೊಸ ನಿಯಮಗಳು ಜಾರಿಗೆ!
ಕಾರ್ಯಕ್ರಮ ಹಾಗೂ ನೆಚ್ಚಿನ ಆಟಗಾರರನ್ನು ವೀಕ್ಷಿಸಲು ಕ್ರೀಡಾಂಗಣಕ್ಕೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದರು. ಆ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಟ್ಟಿದ್ದರು. ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ಅವರನ್ನು ಅಮಾನತು ಮಾಡಿತ್ತು. ಈ ಅಮಾನತು ಪ್ರಶ್ನಿಸಿ ವಿಕಾಸ್ ಕುಮಾರ್ ಅವರು ಸಿಎಟಿ ಮೊರೆ ಹೋಗಿದ್ದರು.
ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿ ವಿವರಣೆ ಕೋರಿತ್ತು. ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಜಿ ಹೆಚ್ಚುವರಿ ಕಾಲಾವಕಾಶ ಕೋರಿದ್ದರು. ಅದರಂತೆ ವಿಚಾರಣೆ ಮುಂದೂಡಲಾಗಿತ್ತು. ಇದೀಗ, ವಿಕಾಸ್ ಕುಮಾರ್ ಅವರ ಅಮಾನತು ಆದೇಶ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಸಿಎಟಿ ನಿರ್ದೇಶನ ನೀಡಿರುವುದರಿಂದ, ಪೊಲೀಸ್ ಆಯುಕ್ತ ಬಿ ದಯಾನಂದ ಹಾಗೂ ಇತರರ ಅಮಾನತು ಆದೇಶ ಏನಾಗಲಿದೆ ಎಂಬ ಕುತೂಹಲ ಮೂಡಿದೆ.