ಕೋಲ್ಕತಾ:- ಪಶ್ಚಿಮ ಬಂಗಾಳದ ಮೇದಿನಿಪುರದಲ್ಲಿ ಅಮ್ಮಾ, ನಾನು ಚಿಪ್ಸ್ ಕದ್ದಿಲ್ಲಮ್ಮಾ ಎಂದು ಡೆತ್‌ನೋಟ್ ಬರೆದಿಟ್ಟು 7ನೇ ತರಗತಿ ವಿದ್ಯಾರ್ಥಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.
ಪ್ರತಿಯೊಬ್ಬರು ವಾರ್ಷಿಕ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ-ಜನತೆಗೆ ಸಿಎಂ ಸಲಹೆ!
13 ವರ್ಷದ ಕೃಷ್ಣೇಂದು ದಾಸ್ ಮೃತ ಬಾಲಕ. ಈ ಕುರಿತು ಮೃತ ಬಾಲಕನ ಕುಟುಂಬಸ್ಥರು ಮಾಹಿತಿ ನೀಡಿದ್ದು, ಕಳೆದ ಭಾನುವಾರ ತಿಂಡಿ ಖರೀದಿಸಲೆಂದು ಬಾಲಕ ಅಂಗಡಿಗೆ ಹೋಗಿದ್ದ. ಆ ಸಮಯದಲ್ಲಿ ಅಂಗಡಿಯಲ್ಲಿ ಯಾರೂ ಇರಲಿಲ್ಲ. ಹೀಗಾಗಿ ಅಂಗಡಿಯ ಹೊರಗಿದ್ದ ಚಿಪ್ಸ್ ಪ್ಯಾಕೆಟ್ ನೋಡಿ, ಅದನ್ನು ಎತ್ತಿಕೊಂಡು ಹೋಗಿದ್ದಾನೆ ಎಂದು ತಿಳಿಸಿದ್ದಾರೆ.
ಈ ಘಟನೆಯ ಬಗ್ಗೆ ತಿಳಿದ ಮೃತ ಬಾಲಕನ ತಾಯಿ, ಮತ್ತೆ ಆತನನ್ನು ಅಂಗಡಿಯ ಬಳಿ ಕರೆದೊಯ್ದು ಗದರಿಸಿದ್ದರು. ಮನೆಗೆ ಬಂದವನೇ ಬಾಗಿಲು ಹಾಕಿಕೊಂಡು ಕೋಣೆಯೊಳಗೆ ಹೋಗಿ, ಅಮ್ಮಾ, ನಾನು ಚಿಪ್ಸ್ ಕದ್ದಿಲ್ಲಮ್ಮಾ. ನನ್ನನ್ನು ಕ್ಷಮಿಸು ಎಂದು ಬರೆದಿಟ್ಟು, ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ. ಬಳಿಕ ಬಾಲಕನನ್ನು ತಮ್ಲುಕ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಸಾವನ್ನಪ್ಪಿದ್ದಾನೆ.
ಸದ್ಯ ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.